ಜೂನ್ 3 ರಿಂದ ಬೆಂಗಳೂರು-ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ
- May 31
- 1 min read

ಬೆಂಗಳೂರಿನಿಂದ ಕರ್ನಾಟಕ ಕರಾವಳಿ ಭಾಗಕ್ಕೆ ಸಂಪರ್ಕ ಕಲ್ಪಿಸುವ ಬಹುನಿರೀಕ್ಷಿತ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರ ಜೂನ್ 3 ರಂದು ಆರಂಭವಾಗಲಿದೆ. ಈ ವೇಗದ ರೈಲು ಸಾರಿಗೆಯು ಕರಾವಳಿ ಭಾಗದ ಪ್ರವಾಸೋದ್ಯಮ, ವ್ಯಾಪಾರ ಮತ್ತು ವಾಣಿಜ್ಯ ಕ್ಷೇತ್ರಗಳಿಗೆ ಹೆಚ್ಚಿನ ಉತ್ತೇಜನ ನೀಡಲಿದೆ.
ಜೂನ್ 3 ರಂದು ಬೆಳಗ್ಗೆ 6 ಗಂಟೆಗೆ ಯಶವಂತಪುರದಿಂದ ಹೊರಡುವ 8 ಬೋಗಿಗಳ ಈ ರೈಲು, 8 ಗಂಟೆ 40 ನಿಮಿಷಗಳಲ್ಲಿ ಮಂಗಳೂರು ತಲುಪಲಿದೆ. ಪ್ರಾಯೋಗಿಕ ಸಂಚಾರದಲ್ಲಿ ರೈಲಿನ ವೇಗ, ಸಾಮರ್ಥ್ಯ ಹಾಗೂ ಘಾಟಿ ಮಾರ್ಗದ ಸುರಂಗಗಳಲ್ಲಿ ಅದರ ಕಾರ್ಯಕ್ಷಮತೆಯನ್ನು ತಪಾಸಣೆ ಮಾಡಲಾಗುತ್ತದೆ.
ತಾತ್ಕಾಲಿಕ ವೇಳಾಪಟ್ಟಿಯಂತೆ ರೈಲು ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರಸ್ತೆ ಹಾಗೂ ಪಡೀಲ್ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ. ಮಧ್ಯಾಹ್ನ 2.40ಕ್ಕೆ ಮಂಗಳೂರು ತಲುಪುವ ರೈಲು, ಮರಳಿ ಅದೇ ಮಾರ್ಗವಾಗಿ ಸಂಚರಿಸಿ ರಾತ್ರಿ 11 ಗಂಟೆಗೆ ಬೆಂಗಳೂರನ್ನು ತಲುಪಲಿದೆ.







Comments