ಜೂನ್ 5ಕ್ಕೆ ರಾಜ್ಯಕ್ಕೆ ಮುಂಗಾರು ಪ್ರವೇಶ: 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಮುನ್ಸೂಚನೆ
- Jun 2
- 1 min read

ರಾಜ್ಯಕ್ಕೆ ಜೂನ್ 5 ರಂದು ಮುಂಗಾರು ಮಳೆ ಅಧಿಕೃತವಾಗಿ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಾರಿ ಮುಂಗಾರು ತಡವಾಗಬಹುದು ಎಂಬ ಆತಂಕವಿತ್ತಾದರೂ, ಪ್ರಸ್ತುತ ಸರಿಯಾದ ಸಮಯಕ್ಕೇ ಮಾರುತಗಳು ಆಗಮಿಸುತ್ತಿವೆ.
ಜೂನ್ 2 ರಿಂದ ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗಲಿದ್ದು, ಗದಗ, ಧಾರವಾಡ, ಮೈಸೂರು, ಹಾಸನ ಸೇರಿದಂತೆ 8 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಲ್ಲಿ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ.
ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಜೂನ್ 1 ರಿಂದ 5ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಲಿದೆ. ಬಿರುಗಾಳಿ ಬೀಸುವ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ರೈತರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ಸೂಚಿಸಿದೆ.







Comments