ಕಬಕ ಪುತ್ತೂರು ನಿಲ್ದಾಣದಲ್ಲಿ ವಂದೇ ಭಾರತ್ ನಿಲುಗಡೆಗೆ ಆಗ್ರಹ: ಸಹಿ ಅಭಿಯಾನಕ್ಕೆ ಭರ್ಜರಿ ಬೆಂಬಲ

ಪ್ರಸ್ತಾವಿತ ಮಂಗಳೂರು-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕಬಕ ಪುತ್ತೂರು ರೈಲು ನಿಲ್ದಾಣದಲ್ಲಿ ನಿಲುಗಡೆ ನೀಡಬೇಕು ಎಂದು ಆಗ್ರಹಿಸಿ ಆರಂಭಿಸಲಾದ ಆನ್‌ಲೈನ್ ಸಹಿ ಅಭಿಯಾನಕ್ಕೆ ಸಾರ್ವಜನಿಕರಿಂದ ಭರ್ಜರಿ ಸ್ಪಂದನೆ ವ್ಯಕ್ತವಾಗಿದೆ.

ಸ್ಥಳೀಯ ಪ್ರಯಾಣಿಕರ ಹಿತದೃಷ್ಟಿಯಿಂದ ಆರಂಭಗೊಂಡ ಈ ಅಭಿಯಾನದಲ್ಲಿ ಸಾವಿರಾರು ಜನರು ಉತ್ಸಾಹದಿಂದ ಭಾಗವಹಿಸಿ ಸಹಿ ಹಾಕುವ ಮೂಲಕ ತಮ್ಮ ಬೆಂಬಲ ಸೂಚಿಸುತ್ತಿದ್ದಾರೆ.
ಈ ಅಭಿಯಾನವು ಸಾರ್ವಜನಿಕ ವಲಯದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಭಾನುವಾರ ಸಂಜೆಯ ವೇಳೆಗೆ 2,500ಕ್ಕೂ ಅಧಿಕ ಮಂದಿ ಸಹಿ ಮಾಡಿ ತಮ್ಮ ಆಗ್ರಹವನ್ನು ರೈಲ್ವೆ ಇಲಾಖೆಗೆ ಮುಟ್ಟಿಸುವ ಪ್ರಯತ್ನ ಮಾಡಿದ್ದಾರೆ.







Comments