;
top of page

ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಬೆಂಕಿ; 37 ಪ್ರಯಾಣಿಕರು ಪಾರು

Sep 6
1 min read

ಕಡಬ: ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ವೊಂದು ಚಲಿಸುತ್ತಿದ್ದ ವೇಳೆ ಬೆಂಕಿಗಾಹುತಿಯಾದ ಘಟನೆ ಸೆ. 5ರ ತಡರಾತ್ರಿ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಕೈಕಂಬ–ಗುಂಡ್ಯ ರಸ್ತೆಯ ಎರ್ಮಾಯಿಲ್‌ನಲ್ಲಿ ನಡೆದಿದೆ.

ಬಸ್‌ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಹೊಗೆ ಹಾಗೂ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ತಕ್ಷಣವೇ ಸಮಯಪ್ರಜ್ಞೆ ಮೆರೆದು ಬಸ್‌ನ್ನು ರಸ್ತೆ ಬದಿಗೆ ನಿಲ್ಲಿಸಿದ್ದಾರೆ. ಬಳಿಕ ಪ್ರಯಾಣಿಕರಿಗೆ ಕೂಡಲೇ ಬಸ್‌ನಿಂದ ಕೆಳಗಿಳಿಯುವಂತೆ ಸೂಚಿಸಿದ್ದಾರೆ.

ಚಾಲಕನ ಸಮಯೋಚಿತ ಕ್ರಮದಿಂದ ಬಸ್‌ನಲ್ಲಿದ್ದ ಎಲ್ಲ 37 ಪ್ರಯಾಣಿಕರೂ ಸುರಕ್ಷಿತವಾಗಿ ಕೆಳಗಿಳಿದಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪ್ರಯಾಣಿಕರು ಕೆಳಗಿಳಿದ ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ಬಸ್‌ಗೆ ವ್ಯಾಪಿಸಿದ್ದು, ಬಸ್‌ ಸಂಪೂರ್ಣವಾಗಿ ಸುಟ್ಟು ಜಖಂಗೊಂಡಿದೆ.

ಘಟನೆ ತಿಳಿಯುತ್ತಿದ್ದಂತೆ ಸ್ಥಳೀಯರು ಅಗ್ನಿಶಾಮಕ ದಳ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಡರಾತ್ರಿಯೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ಬಸ್‌ ಬಹುತೇಕ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿತ್ತು.

ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸ್‌ಗೆ ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣವೇನು ಎಂಬುದು ತನಿಖೆಯ ಬಳಿಕ ತಿಳಿದುಬರಬೇಕಿದೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page