;
top of page

ಕಡಬ: ಪತ್ನಿಗೆ ಹಲ್ಲೆ ಆರೋಪ; ವಿಷ ಸೇವಿಸಿದ ಪತಿ ಆಸ್ಪತ್ರೆಗೆ ದಾಖಲು

Sep 8
1 min read

ಕಡಬ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಗೆ ಹಲ್ಲೆ ನಡೆಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ಬೆಳ್ಳಾರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೇ ವೇಳೆ, ಹಲ್ಲೆ ಆರೋಪ ಎದುರಿಸುತ್ತಿರುವ ಪತಿ ವಿಷ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದುಬಂದಿದೆ.


ಕಡಬ ತಾಲೂಕಿನ ಕುದ್ಮಾರು ನಿವಾಸಿ ಸುಚಿತ್ರಾ ಪಿ.ಜೆ. (38) ಅವರು ನೀಡಿದ ದೂರಿನಂತೆ, ಸುಮಾರು ನಾಲ್ಕು ವರ್ಷಗಳ ಹಿಂದೆ ಕುದ್ಮಾರು ನಿವಾಸಿ ಚಿದಾನಂದ ಕೆ. ಅವರೊಂದಿಗೆ ವಿವಾಹವಾಗಿದ್ದರು.


ಸೆ. 6ರಂದು ಬೆಳಿಗ್ಗೆ ದಂಪತಿ ನಡುವೆ ಕೌಟುಂಬಿಕ ವಿಚಾರಕ್ಕೆ ಸಂಬಂಧಿಸಿ ಕಲಹ ಉಂಟಾಗಿದೆ. ಈ ವೇಳೆ ಚಿದಾನಂದ ಅವರು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸುಚಿತ್ರಾ ದೂರಿನಲ್ಲಿ ಆರೋಪಿಸಿದ್ದಾರೆ.


ಹಲ್ಲೆಯಿಂದ ಕುಸಿದುಬಿದ್ದಿದ್ದ ಸುಚಿತ್ರಾ ಅವರನ್ನು ನೆರೆಮನೆಯವರು ಉಪಚರಿಸಿದ್ದು, ಬಳಿಕ ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಈ ಸಂಬಂಧ ಬೆಳ್ಳಾರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈ ನಡುವೆ ಚಿದಾನಂದ ಅವರು ವಿಷ ಸೇವಿಸಿ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

Comments

Couldn’t Load Comments
It looks like there was a technical problem. Try reconnecting or refreshing the page.

ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page