;
top of page

ಕಡಬ : ಮರ್ದಾಳದಲ್ಲಿ ಅವಘಡ: ಚರಂಡಿಗೆ ಉರುಳಿದ ಸಿಮೆಂಟ್ ಇಟ್ಟಿಗೆ ತುಂಬಿದ ಲಾರಿ

Aug 10
1 min read

ಕಡಬ, ಆ.10: ಮೆಲ್ಕಾರ್‌ನಿಂದ ಸುಬ್ರಹ್ಮಣ್ಯಕ್ಕೆ ಸಿಮೆಂಟ್ ಇಟ್ಟಿಗೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ರವಿವಾರ ಕಡಬ ಸಮೀಪದ ಮರ್ದಾಳದಲ್ಲಿ ನಡೆದಿದೆ.

ಚಾಲಕನ ನಿಯಂತ್ರಣ ಕಳೆದುಕೊಂಡ ಲಾರಿ ರಸ್ತೆ ಬದಿಗೆ ಚಲಿಸಿ ಚರಂಡಿಗೆ ಬಿದ್ದಿದೆ. ಅದೃಷ್ಟವಶಾತ್ ಲಾರಿ ಚಾಲಕ ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.

ಘಟನೆಯ ಬಳಿಕ ಲಾರಿಯಲ್ಲಿದ್ದ ಸಿಮೆಂಟ್ ಇಟ್ಟಿಗೆಗಳನ್ನು ಮತ್ತೊಂದು ಲಾರಿಗೆ ಸ್ಥಳಾಂತರಿಸಿ ಸುಬ್ರಹ್ಮಣ್ಯಕ್ಕೆ ಕಳುಹಿಸಲಾಯಿತು. ಬಳಿಕ ಕ್ರೇನ್‌ನ್ನು ಸ್ಥಳಕ್ಕೆ ಕರೆಸಿ ಚರಂಡಿಗೆ ಬಿದ್ದಿದ್ದ ಲಾರಿಯನ್ನು ಮೇಲಕ್ಕೆತ್ತಲಾಯಿತು.

ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page