;
top of page

ಕಡಬ: ಮತಾಂತರ ವದಂತಿಗೆ ತೆರೆ ಎಳೆದ ಪೊಲೀಸರು

  • May 9
  • 1 min read

ಕಡಬ: ತಾಲೂಕಿನ ಐತೂರು ಗ್ರಾಮದ ಕೆರ್ಮಾಯಿಯ ಮನೆಯೊಂದರಲ್ಲಿ ಬಲವಂತದ ಮತಾಂತರ ನಡೆಯುತ್ತಿದೆ ಎಂಬ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಕಡಬ ಪೊಲೀಸರು ಇತ್ತೀಚೆಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಹಿಳೆಯರು ಮತ್ತು ಮಕ್ಕಳನ್ನು ಸೇರಿಸಿಕೊಂಡು ಧಾರ್ಮಿಕ ಮತಾಂತರ ಮಾಡಲಾಗುತ್ತಿದೆ ಎಂಬ ಮಾಹಿತಿಯ ಮೇರೆಗೆ ಪೊಲೀಸರು ಈ ಕ್ರಮ ಕೈಗೊಂಡಿದ್ದರು.

ತನಿಖೆಯ ವೇಳೆ ಅಲ್ಲಿ ಬೆಂಗಳೂರು ಮೂಲದ ನಾಲ್ಕು ಕುಟುಂಬಗಳ 23 ಸದಸ್ಯರು ಇರುವುದು ಕಂಡುಬಂದಿದೆ. ಇವರೆಲ್ಲರೂ ಮಂಗಳೂರಿಗೆ ಪ್ರವಾಸಕ್ಕೆ ಬಂದಿದ್ದು, ಪರಿಚಿತರಾದ ಚರ್ಚ್ ಫಾದರ್ ಅವರ ಸಹೋದರನ ಮನೆಯಲ್ಲಿ ತಂಗಿದ್ದರು. ಇವರು ಕಳೆದ 15-20 ವರ್ಷಗಳಿಂದ ಸ್ವಯಂಪ್ರೇರಿತವಾಗಿ ಕ್ರಿಶ್ಚಿಯನ್ ಧರ್ಮ ಪಾಲಿಸುತ್ತಿರುವುದಾಗಿ ಪೊಲೀಸರ ಮುಂದೆ ಸ್ಪಷ್ಟಪಡಿಸಿದ್ದಾರೆ.

ಪೊಲೀಸ್ ವಿಚಾರಣೆಯಿಂದ ಇದು ಬಲವಂತದ ಮತಾಂತರವಲ್ಲ, ಕೇವಲ ಪ್ರವಾಸಿಗರ ಭೇಟಿ ಎಂಬುದು ದೃಢಪಟ್ಟಿದೆ. ಯಾವುದೇ ಅನೈತಿಕ ಚಟುವಟಿಕೆಗಳು ಅಲ್ಲಿ ನಡೆದಿಲ್ಲ ಎಂದು ಸ್ಪಷ್ಟಪಡಿಸುವ ಮೂಲಕ ಕಳೆದ ಕೆಲವು ಗಂಟೆಗಳಿಂದ ಹರಿದಾಡುತ್ತಿದ್ದ ಮತಾಂತರದ ವದಂತಿಗಳಿಗೆ ಕಡಬ ಪೊಲೀಸರು ಅಧಿಕೃತವಾಗಿ ತೆರೆ ಎಳೆದಿದ್ದಾರೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page