;
top of page

ಆಲಂಕಾರು ಥಾರ್ ಡಿಕ್ಕಿಗೆ ಬೈಕ್ ಸವಾರ ಸಾವು; ಅಪಘಾತದ ಬಳಿಕ ಚಾಲಕ ಪರಾರಿ

Sep 26
1 min read



ಕಡಬ: ಆಲಂಕಾರು ಗ್ರಾಮದ ಆಚಾರಿಕೊಟ್ಟದಲ್ಲಿ ಮಹೀಂದ್ರಾ ಥಾರ್ ವಾಹನವು ಬೈಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಸೆ.25ರ ರಾತ್ರಿ ನಡೆದಿದೆ.


ಮೃತರನ್ನು ಆಲಂಕಾರು ನಾಡ್ತಿಲ ನಿವಾಸಿ ಲೋಕೇಶ್ ನಾಡ್ತಿಲ (42) ಎಂದು ಗುರುತಿಸಲಾಗಿದೆ. ರಾತ್ರಿ ಸುಮಾರು 9.45ಕ್ಕೆ ಲೋಕೇಶ್ ಅವರು ಟಿವಿಎಸ್ ವಿಕ್ಟರ್ ಬೈಕ್‌ನಲ್ಲಿ ಪೇಟೆಯಿಂದ ಆಚಾರಿಕೊಟ್ಟ ಕಡೆಗೆ ತೆರಳುತ್ತಿದ್ದಾಗ, ಹಿಂದಿನಿಂದ ಬಂದ ಮಹೀಂದ್ರಾ ಥಾರ್ (KA-21-MB-0233) ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.


ಡಿಕ್ಕಿಯ ಪರಿಣಾಮ ಗಂಭೀರವಾಗಿ ಗಾಯಗೊಂಡ ಲೋಕೇಶ್ ಅವರನ್ನು ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಗೆ ದಾಖಲಿಸಿ, ಬಳಿಕ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 11ರ ಸುಮಾರಿಗೆ ಮೃತಪಟ್ಟಿದ್ದಾರೆ.


ಅಪಘಾತದ ಬಳಿಕ ಥಾರ್ ಚಾಲಕ ವಾಹನ ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ರಂಜಿತ್ ಬಿ. ನೀಡಿದ ದೂರಿನ ಮೇರೆಗೆ ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

​

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page