ಕುಮಾರಧಾರ ನದಿಯಲ್ಲಿ, ನಾಪತ್ತೆಯಾಗಿದ 26 ವರ್ಷದ ಯುವಕನ ಮೃತದೇಹ ಪತ್ತೆ
- Apr 28
- 1 min read

ಕಡಬ: ಕುಮಾರಧಾರ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಸೋಮವಾರ ಸಂಜೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆಯಾಗಿದೆ. ಮೃತರನ್ನು ಮಂಜು ಅವರ ಪುತ್ರ ರಕ್ಷಿತ್ (26) ಎಂದು ಗುರುತಿಸಲಾಗಿದೆ.

ಸೋಮವಾರ ಸಂಜೆ ಐತ್ತೂರು ಗ್ರಾಮದ ಅರಬ್ಬಿ ತೋಡು ಪ್ರದೇಶದಲ್ಲಿ ರಕ್ಷಿತ್ ತನ್ನ ಸ್ನೇಹಿತರೊಂದಿಗೆ ಸ್ನಾನಕ್ಕೆ ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ರಕ್ಷಿತ್‌ಗೆ ಈಜು ತಿಳಿದಿದ್ದರೂ ನದಿಯ ಬಲವಾದ ಸುಳಿಗೆ ಸಿಲುಕಿ ನೀರಿನಲ್ಲಿ ಮುಳುಗಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಘಟನೆ ನಡೆದ ತಕ್ಷಣ ಸ್ನೇಹಿತರು ಹಾಗೂ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಡಬ ಪೊಲೀಸರು ಮತ್ತು ಪುತ್ತೂರಿನ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಸ್ಥಳೀಯರ ಸಹಕಾರದೊಂದಿಗೆ ಶೋಧ ಕಾರ್ಯಾಚರಣೆ ಆರಂಭಿಸಿದರು. ಆದರೆ ಕತ್ತಲೆ ಆವರಿಸಿದ ಕಾರಣ ಶೋಧ ಕಾರ್ಯಕ್ಕೆ ತೊಂದರೆ ಉಂಟಾಯಿತು.
ತಡರಾತ್ರಿ ಖ್ಯಾತ ಮುಳುಗು ತಜ್ಞ ಈಶ್ವರ್ ಮಲ್ಪೆ ಹಾಗೂ ಅವರ ತಂಡ ಸ್ಥಳಕ್ಕೆ ಆಗಮಿಸಿ, ಸುಮಾರು 30 ಅಡಿ ಆಳದಲ್ಲಿ ಸಿಲುಕಿದ್ದ ಮೃತದೇಹವನ್ನು ಹೊರತೆಗೆದಿದ್ದಾರೆ.







Comments