ಕಲ್ಲೇಗ ಕೊಲೆ ಪ್ರಕರಣ: ಪ್ರಮುಖ ಆರೋಪಿ ಚೇತನ್‌ಗೆ ಹೈಕೋರ್ಟ್ ಜಾಮೀನು

ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥರಾಗಿದ್ದ ಅಕ್ಷಯ್ ಕಲ್ಲೇಗ ಅವರ ಕೊಲೆ ಪ್ರಕರಣದಲ್ಲಿ ಪ್ರಥಮ ಆರೋಪಿ ಕೃಷ್ಣನಗರದ ಚೇತನ್‌ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಪ್ರಕರಣದಲ್ಲಿ ಪ್ರಮುಖ ಆರೋಪಿಗಳಿಗೆ ಜಾಮೀನು ದೊರೆಯುತ್ತಿರುವುದು ಮಹತ್ವದ ಬೆಳವಣಿಗೆಯಾಗಿದೆ.
2023ರ ನವೆಂಬರ್ 6ರಂದು ರಾತ್ರಿ ನೆಹರುನಗರದಲ್ಲಿ ಅಕ್ಷಯ್ ಕಲ್ಲೇಗ ಅವರನ್ನು ಹತ್ಯೆ ಮಾಡಲಾಗಿತ್ತು. ಘಟನೆಗೆ ಸಂಬಂಧಿಸಿ ಕೃಷ್ಣನಗರದ ಚೇತನ್, ಪಡೀಲು ನಿವಾಸಿ ಮನೀಷ್, ಬನ್ನೂರಿನ ಮಂಜುನಾಥ್ ಯಾನೆ ಹರಿ ಹಾಗೂ ಕೇಶವ ಪಡೀಲ್ ಅವರನ್ನು ಪೊಲೀಸರು ಬಂಧಿಸಿದ್ದರು.

ಪ್ರಕರಣದಲ್ಲಿ ಸುಮಾರು ಮೂರು ವರ್ಷಗಳ ಬಳಿಕ ಪ್ರಥಮ ಆರೋಪಿ ಚೇತನ್‌ಗೆ ಜಾಮೀನು ದೊರೆತಿದೆ. ಇದೇ ಪ್ರಕರಣದ ಎರಡನೇ ಆರೋಪಿ ಮನೀಷ್‌ಗೂ ಕೆಲ ದಿನಗಳ ಹಿಂದಷ್ಟೇ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು.
ಇನ್ನು ಮೂರನೇ ಆರೋಪಿ ಮಂಜುನಾಥ್ ಶೆಣೈ ಹಾಗೂ ನಾಲ್ಕನೇ ಆರೋಪಿ ಕೇಶವ ಅವರಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಈ ಹಿಂದೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.
ಹೀಗಾಗಿ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ನಾಲ್ವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.







Comments