;
top of page

ಕಲ್ಲಡ್ಕ ಫ್ಲೈಓವರ್‌ನಲ್ಲಿ ಲಾರಿ ತಡೆ: 6ಕ್ಕೂ ಅಧಿಕ ದನಗಳ ರಕ್ಷಣೆ, ಚಾಲಕ ಎಸ್ಕೇಪ್

Sep 30
1 min read

ಬಂಟ್ವಾಳ: ದನಗಳನ್ನು ಸಾಗಿಸಲಾಗುತ್ತಿದೆ ಎನ್ನಲಾದ ಲಾರಿಯನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಕಲ್ಲಡ್ಕ ಫ್ಲೈಓವರ್‌ನಲ್ಲಿ ತಡೆದು ಪೊಲೀಸರಿಗೆ ಮಾಹಿತಿ ನೀಡಿದ ಘಟನೆ ಬುಧವಾರ ಮುಂಜಾನೆ ನಡೆದಿದೆ.

ಮಾಣಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿಯನ್ನು ತಡೆದು ಪರಿಶೀಲಿಸಿದಾಗ, ಲಾರಿಯಲ್ಲಿ ಆರುಕ್ಕೂ ಅಧಿಕ ದನಗಳು ಪತ್ತೆಯಾಗಿವೆ ಎನ್ನಲಾಗಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಬಂದ ಬಂಟ್ವಾಳ ನಗರ ಠಾಣೆ ಪೊಲೀಸರು ದನಗಳನ್ನು ರಕ್ಷಿಸಿ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.

ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಲಾರಿ ಚಾಲಕ ವಾಹನವನ್ನು ಬಿಟ್ಟು ಪರಾರಿಯಾಗಿದ್ದಾನೆ ಎನ್ನಲಾಗಿದೆ.

ದನಗಳನ್ನು ಎಲ್ಲಿಂದ ತರಲಾಗಿತ್ತು ಹಾಗೂ ಎಲ್ಲಿಗೆ ಸಾಗಿಸಲಾಗುತ್ತಿತ್ತು ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

​

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page