;
top of page

ಕಾಣಿಯೂರು: ವಿದ್ಯುತ್ ಕಾಮಗಾರಿ ಮೇಲುಸ್ತುವಾರಿ ವಹಿಸಿದ್ದ ವ್ಯಕ್ತಿ ನಾಪತ್ತೆ, ಪೊಲೀಸ್ ದೂರು ದಾಖಲು

  • May 29
  • 1 min read

ತಂತಿ ಎಳೆಯುವ ವಿದ್ಯುತ್ ಕಾಮಗಾರಿಯ ಮೇಲುಸ್ತುವಾರಿ ನೋಡಿಕೊಳ್ಳುತ್ತಿದ್ದ ಕಾಣಿಯೂರು ಗ್ರಾಮದ ಪುಣ್ಚತ್ತಾರು ನಿವಾಸಿಯೊಬ್ಬರು ಪತ್ನಿ ಮನೆಯಿಂದ ಕೆಲಸಕ್ಕೆಂದು ಹೋದವರು ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಪತ್ತೆಯಾದವರನ್ನು ವಿನಯ್ (43) ಎಂದು ಗುರುತಿಸಲಾಗಿದೆ. ಇವರು ಮಂಗಳೂರಿನ ‘ಆದಿತ್ಯ ಟ್ರೇಡಿಂಗ್ ಸೊಲ್ಯೂಷನ್’ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ಇದರೊಂದಿಗೆ ಪಾರ್ಟ್ ಟೈಮ್ ನೆಲೆಯಲ್ಲಿ ‘ಎಸ್.ಎಲ್.ವಿ’ ಕಂಪೆನಿಯ ‘ನಂಜುಂಡಿ ಟ್ರೇಡರ್ಸ್‌’ನಲ್ಲಿ ವಿದ್ಯುತ್ ತಂತಿ ಎಳೆಯುವ ಕಾಮಗಾರಿಯ ಸೂಪರ್‌ವೈಸರ್ ಆಗಿಯೂ ಕಾರ್ಯನಿರ್ವಹಿಸುತ್ತಿದ್ದರು.

ಇತ್ತೀಚೆಗೆ ವಿನಯ್ ಪುತ್ತೂರಿನ ಕೆಮ್ಮಿಂಜೆ ಗ್ರಾಮದ ನೈತ್ತಾಡಿಯಲ್ಲಿರುವ ಪತ್ನಿ ಮನೆಯಲ್ಲಿದ್ದರು. ಮೇ 10ರಂದು ಕೆಲಸಕ್ಕೆಂದು ಹೋದವರು ಮರಳಿ ಬಂದಿಲ್ಲ, ಅವರ ಮೊಬೈಲ್ ಕೂಡ ಸ್ವಿಚ್ ಆಫ್ ಆಗಿದೆ. ಎಲ್ಲೂ ಪತ್ತೆಯಾಗದ ಹಿನ್ನೆಲೆಯಲ್ಲಿ ಪತ್ನಿ ಭವ್ಯ ನೀಡಿದ ದೂರಿನ ಮೇರೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page