;
top of page

ಕಾಪು: ಕೆಎಂಎಫ್ ಮಾಜಿ ಅಧ್ಯಕ್ಷ ದಿವಾಕರ ಶೆಟ್ಟಿ ಅವರ ಮನೆಗೆ ನುಗ್ಗಿದ ಕಳ್ಳರು; ಲಕ್ಷಾಂತರ ನಗದು ಕಳವು

  • Writer: sathyapathanewsplu
    sathyapathanewsplu
  • 2 days ago
  • 1 min read

ಕಾಪು: ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ (DKMUL) ಮಾಜಿ ಅಧ್ಯಕ್ಷರಾದ ದಿವಾಕರ ಶೆಟ್ಟಿ ಅವರ ಮನೆಗೆ ಗುರುವಾರ ರಾತ್ರಿ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ನಗದನ್ನು ದೋಚಿ ಪರಾರಿಯಾಗಿದ್ದಾರೆ. ಮನೆಯ ಮಾಲೀಕರು ಊರಿನಲ್ಲಿ ಇಲ್ಲದ ಸಮಯವನ್ನೇ ಹೊಂಚು ಹಾಕಿದ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ.

ದಿವಾಕರ ಶೆಟ್ಟಿ ಅವರು ಕುಟುಂಬದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಮುಂಬೈಗೆ ತೆರಳಿದ್ದರು. ಈ ಸಂದರ್ಭದಲ್ಲಿ ಮನೆಯ ಮೇಲ್ವಿಚಾರಣೆಯ ಜವಾಬ್ದಾರಿಯನ್ನು ಕಾಪು ಪುರಸಭೆಯ ಸದಸ್ಯರಾದ ಸುರೇಶ್ ಶೇರಿಗಾರ್ ಅವರಿಗೆ ವಹಿಸಲಾಗಿತ್ತು. ಘಟನೆ ನಡೆದ ರಾತ್ರಿ ಸುರೇಶ್ ಅವರು ಮನೆಯ ಮೇಲಿನ ಮಹಡಿಯಲ್ಲಿ ಮಲಗಿದ್ದರು. ಈ ವೇಳೆ ಮುಸುಕು ಧರಿಸಿದ ಕಳ್ಳರ ತಂಡ ಬಾಗಿಲು ಒಡೆದು ಒಳನುಗ್ಗಿದ್ದು, ಕೆಳಗಿನ ಮಹಡಿಯಲ್ಲಿದ್ದ ನಗದನ್ನು ದೋಚಿದೆ.

ಮೇಲಿನ ಮಹಡಿಯಲ್ಲಿ ವ್ಯಕ್ತಿಯಿದ್ದರೂ ಎದೆಗುಂದದ ಕಳ್ಳರು ಕೈಚಳಕ ತೋರಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಘಟನಾ ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಸಾಕ್ಷ್ಯ ಸಂಗ್ರಹಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಕಳ್ಳರಿಗಾಗಿ ಹುಡುಕಾಟ ತೀವ್ರಗೊಳಿಸಿದ್ದಾರೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page