;
top of page

ಕಾರವಾರ: ಅರಬ್ಬಿ ಸಮುದ್ರದಲ್ಲಿ ಮುಳುಗಿದ ಮೀನುಗಾರಿಕಾ ಬೋಟ್; 24 ಮೀನುಗಾರರ ಸಾಹಸಿಕ ರಕ್ಷಣೆ!

Aug 30
1 min read

ಕಾರವಾರ: ಇಲ್ಲಿನ ಅಂಜದೀವ್ ದ್ವೀಪದ ಸಮೀಪ ಮೀನುಗಾರಿಕೆಗೆ ತೆರಳಿದ್ದ ಬೆಳಂಬರ್ ಮೂಲದ ನೀಲಕಂಠ ಖಾರ್ವಿ ಅವರಿಗೆ ಸೇರಿದ 'ಶ್ರೀ ಮಾತಾ' ಎಂಬ ಮೀನುಗಾರಿಕಾ ಬೋಟ್ ಅರಬ್ಬಿ ಸಮುದ್ರದಲ್ಲಿ ಅವಘಡಕ್ಕೀಡಾಗಿ ಮುಳುಗಡೆಯಾಗಿದೆ.


ವಿಷಯ ತಿಳಿಯುತ್ತಿದ್ದಂತೆಯೇ ಸಮೀಪದಲ್ಲಿದ್ದ ಐದಾರು ಬೋಟ್‌ಗಳ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ, ಹಗ್ಗದ ನೆರವಿನಿಂದ ಬೋಟ್‌ನಲ್ಲಿದ್ದ ಎಲ್ಲಾ 24 ಮಂದಿ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಬೋಟ್ ಅನ್ನು ಉಳಿಸಲು ಯತ್ನಿಸಿದರೂ ಅದು ಸಂಪೂರ್ಣವಾಗಿ ಸಮುದ್ರದ ಪಾಲಾಗಿದೆ. ಘಟನೆಯಲ್ಲಿ ಸುಮಾರು 50 ಲಕ್ಷ ರೂಪಾಯಿಗೂ ಅಧಿಕ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page