;
top of page

ಕರ್ನಾಟಕದಲ್ಲಿ ಸಾರಿಗೆ ಮುಷ್ಕರದ ಬಿಸಿ: ಮೇ 20ರಿಂದ ಬಸ್‌ ಸಂಚಾರ ಸ್ಥಗಿತ?

  • May 3
  • 1 min read

ವೇತನ ಹೆಚ್ಚಳದ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಜಂಟಿ ಕ್ರಿಯಾ ಸಮಿತಿ (JAC) ಮೇ 20ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಸಾರಿಗೆ ಸಚಿವರೊಂದಿಗಿನ ಮಾತುಕತೆ ವಿಫಲವಾಗಿದ್ದು, ಅಂದು ಬೆಳಿಗ್ಗೆ 6 ಗಂಟೆಯಿಂದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯೂಕೆಆರ್‌ಟಿಸಿ ಮತ್ತು ಕೆಕೆಆರ್‌ಟಿಸಿ ಬಸ್ ಸೇವೆಗಳು ಸ್ಥಗಿತಗೊಳ್ಳುವ ಭೀತಿ ಎದುರಾಗಿದೆ.

ಕಾರ್ಮಿಕರು ಶೇ.25ರಷ್ಟು ವೇತನ ಹೆಚ್ಚಳಕ್ಕೆ ಆಗ್ರಹಿಸುತ್ತಿದ್ದರೆ, ಸರ್ಕಾರ ಶೇ.7ರಷ್ಟು ಹೆಚ್ಚಳಕ್ಕೆ ಸೀಮಿತವಾಗಿದೆ. ಇದು ನೌಕರರ ಪಾಲಿಗೆ ಸ್ವೀಕಾರಾರ್ಹವಲ್ಲ ಎಂದು ಒಕ್ಕೂಟದ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವೇತನ ಬಾಕಿ ಪಾವತಿ, ಭತ್ಯೆಗಳ ಹೆಚ್ಚಳ, ಕೋವಿಡ್ ಪರಿಹಾರ ಮತ್ತು ಆಡಳಿತಾತ್ಮಕ ಸಮಸ್ಯೆಗಳ ಪರಿಹಾರಕ್ಕಾಗಿ ನೌಕರರು ಈ ನಿರ್ಧಾರ ಕೈಗೊಂಡಿದ್ದಾರೆ. ಸಾರ್ವಜನಿಕರಿಗೆ ಉಂಟಾಗುವ ತೊಂದರೆಗೆ ಸರ್ಕಾರವೇ ಹೊಣೆಯೆಂದು ಒಕ್ಕೂಟ ಎಚ್ಚರಿಸಿದೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page