ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧ: ಸಿಎಂ ಸಿದ್ದರಾಮಯ್ಯ
- sathyapathanewsplu
- Nov 24
- 1 min read

ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೋ ಅದನ್ನು ನಾನು ಹಾಗೂ ಡಿ.ಕೆ.ಶಿವಕುಮಾರ್ ಕಡ್ಡಾಯವಾಗಿ ಒಪ್ಪಿಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಶಿಡ್ಲಘಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಐದು ತಿಂಗಳ ಹಿಂದೆ ಹೈಕಮಾಂಡ್ ಭೇಟಿಯಾದ ವೇಳೆ ಸಚಿವ ಸಂಪುಟ ಪುನಾರಚನೆ ಕುರಿತು ಚರ್ಚೆ ನಡೆದಿತ್ತು. ಆದರೆ, “ನಾನು 2.5 ವರ್ಷ ಮುಗಿದ ನಂತರ ಅದನ್ನು ಮಾಡೋಣ ಎಂದು ತಿಳಿಸಿದ್ದೇನೆ. ಈಗ ಹೈಕಮಾಂಡ್ ಏನು ಸೂಚನೆ ನೀಡುತ್ತಾರೋ ಅದರಂತೆ ನಡೆದುಕೊಳ್ಳುತ್ತೇವೆ” ಎಂದು ಹೇಳಿದರು.
ಹಣದ ಬಗ್ಗೆ ಬಿಜೆಪಿ ಅಪಪ್ರಚಾರ
ಸರ್ಕಾರದ ಬಳಿ ಹಣವಿಲ್ಲ ಎಂಬ ಬಿಜೆಪಿಯ ಆರೋಪವನ್ನು ತಳ್ಳಿಹಾಕಿದ ಸಿಎಂ,
“ಹಣವಿಲ್ಲದೇ ₹2000 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಲು ಸಾಧ್ಯವೇ? ಗ್ಯಾರಂಟಿ ಯೋಜನೆಗಳಿಗೆ ಈಗಾಗಲೇ ₹1 ಲಕ್ಷ ಕೋಟಿ ರೂ.ಗೂ ಹೆಚ್ಚು ವೆಚ್ಚ ಮಾಡಲಾಗಿದೆ. ನಮ್ಮದು ನುಡಿದಂತೆ ನಡೆಯುವ ಸರ್ಕಾರ” ಎಂದು ಹೇಳಿದರು.
ಚಿಕ್ಕಬಳ್ಳಾಪುರ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳ ಅಭಿವೃದ್ಧಿಗೆ ಅನುದಾನ ನೀಡಲಾಗುತ್ತಿದೆ ಎಂದು ತಿಳಿಸಿದ ಅವರು, ಇಂದು ಜಿಲ್ಲೆಯಲ್ಲೇ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡಲಾಗಿದೆ ಎಂದರು.
“ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. ಸುಳ್ಳು ಬಿಟ್ಟರೆ ಬೇರೆನೂ ಅವರಿಗೆ ಗೊತ್ತಿಲ್ಲ. ಸುಳ್ಳೇ ಅವರ ಮನೆ ದೇವರು” ಎಂದು ಟೀಕಿಸಿದರು.
ಖರ್ಗೆ ಪ್ರತಿಕ್ರಿಯೆ
ರಾಜ್ಯ ಕಾಂಗ್ರೆಸ್‌ನ ಬೆಳವಣಿಗೆ ಕುರಿತು ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,
“ಏನೇ ಇದ್ದರೂ ಹೈಕಮಾಂಡ್ ನೋಡಿಕೊಳ್ಳುತ್ತದೆ. ಇದರ ಬಗ್ಗೆ ಹೆಚ್ಚಾಗಿ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ. ನನಗೆ ಇದಕ್ಕಿಂತ ಹೆಚ್ಚು ಹೇಳಲು ಏನೂ ಇಲ್ಲ” ಎಂದು ಹೇಳಿದರು.
ಪರಮೇಶ್ವರ್ ಸ್ಪಷ್ಟನೆ
ಗೃಹ ಸಚಿವ ಜಿ.ಪರಮೇಶ್ವರ್ ಮಾತನಾಡಿ,
“ಪವರ್ ಶೇರಿಂಗ್ ಬಗ್ಗೆ ಕೆಲ ಗೊಂದಲದ ಮಾತುಗಳು ಕೇಳಿ ಬರುತ್ತಿರಬಹುದು. ಆದರೆ ಅದು ಆಡಳಿತದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಮುಖ್ಯಮಂತ್ರಿ ಹಾಗೂ ಸಚಿವರು ತಮ್ಮ ತಮ್ಮ ಇಲಾಖೆಗಳ ಮೇಲೆ ಸಂಪೂರ್ಣ ಕಂಟ್ರೋಲ್ ಹೊಂದಿ ಕೆಲಸ ಮಾಡುತ್ತಿದ್ದಾರೆ” ಎಂದು ತಿಳಿಸಿದರು.
ಇಲಾಖೆಗಳಲ್ಲಿ ನಡೆಯುತ್ತಿರುವ ಯೋಜನೆಗಳು ಹಾಗೂ ಸರ್ಕಾರದ ಕಾರ್ಯಕ್ರಮಗಳ ಮೇಲೆ ಯಾವುದೇ ರಾಜಕೀಯ ಬದಲಾವಣೆ ಮಾತು ಪರಿಣಾಮ ಬೀರುವುದಿಲ್ಲ. ಹೈಕಮಾಂಡ್‌ಗೆ ಎಲ್ಲವೂ ಸ್ಪಷ್ಟವಾಗಿ ಗೊತ್ತಿದೆ, ಯಾರಿಗೆ ಯಾವ ರೀತಿಯ ಜವಾಬ್ದಾರಿ ನೀಡಬೇಕೆಂಬ ನಿರ್ಧಾರ ಅವರ ಕೈಯಲ್ಲೇ ಇದೆ ಎಂದು ಹೇಳಿದರು.






Comments