ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಉದ್ಯೋಗಾವಕಾಶ PRO ಹುದ್ದೆಗೆ ಅರ್ಜಿ ಆಹ್ವಾನ
- Feb 20
- 1 min read

ಬೆಂಗಳೂರು, ಫೆ.20: ಕರ್ನಾಟಕ ಅರಣ್ಯ ಇಲಾಖೆ ವತಿಯಿಂದ ಸಾರ್ವಜನಿಕ ಸಂಪರ್ಕಾಧಿಕಾರಿ (PRO) ಹುದ್ದೆಗೆ ನೇಮಕಾತಿ ಮಾಡಲು ಅಧಿಸೂಚನೆ ಪ್ರಕಟಿಸಲಾಗಿದೆ. ಈ ಹುದ್ದೆಯನ್ನು ಕರ್ನಾಟಕ ಅರಣ್ಯ, ವನ್ಯಜೀವಿ ಮತ್ತು ಹವಾಮಾನ ಬದಲಾವಣೆ ಪ್ರತಿಷ್ಠಾನ (KFWCCF) ಅಡಿಯಲ್ಲಿ ಎರಡು ವರ್ಷಗಳ ಒಪ್ಪಂದ ಆಧಾರಿತವಾಗಿ ಭರ್ತಿ ಮಾಡಲಾಗುತ್ತದೆ.
ಅರಣ್ಯ ಭವನ, ಮಲ್ಲೇಶ್ವರಂ, ಬೆಂಗಳೂರು ಕೇಂದ್ರ ಕಚೇರಿಯಿಂದ ಪ್ರಕಟಣೆ ಹೊರಡಿಸಲಾಗಿದ್ದು, ಸಾರ್ವಜನಿಕ ಸಂಪರ್ಕ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ.
ಅರ್ಹ ಮತ್ತು ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಅಧಿಕೃತ ವೆಬ್‌ಸೈಟ್ http://kfwccf.in� ಮೂಲಕ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಫೆಬ್ರವರಿ 25 ಕೊನೆಯ ದಿನಾಂಕವಾಗಿರುತ್ತದೆ ಎಂದು ಇಲಾಖೆ ತಿಳಿಸಿದೆ.
ನೇಮಕಾತಿ ವಿಧಾನ, ಅರ್ಹತಾ ಮಾನದಂಡಗಳು ಹಾಗೂ ಸೇವಾ ನಿಯಮಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಇಲಾಖೆಯ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಅರಣ್ಯ ಮತ್ತು ಪರಿಸರ ಸಂರಕ್ಷಣಾ ಕ್ಷೇತ್ರದಲ್ಲಿ ವೃತ್ತಿ ಸಾಧನೆ ಮಾಡಲು ಬಯಸುವವರಿಗೆ ಇದು ಮಹತ್ವದ ಅವಕಾಶವಾಗಿದೆ.







Comments