ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಬಿಜೆಪಿಯ ಹಿರಿಯ ನಾಯಕಿ ಡಾ. ಸುಧಾ ಯಾದವ್ ಅವರು ಇಂದು ಬೆಳಗ್ಗೆ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಐದು ವರ್ಷಗಳ ಸೇವೆ ಪೂರೈಸಿ ನಿರ್ಗಮಿಸುತ್ತಿರುವ ಥಾವರ್ ಚಂದ್ ಗೆಹ್ಲೋಟ್ ಅವರ ಸ್ಥಾನಕ್ಕೆ ಇವರನ್ನು ನಿಯೋಜಿಸಲಾಗಿದೆ. ಕಾರ್ಗಿಲ್ ಹುತಾತ್ಮ ಯೋಧನ ಪತ್ನಿಯಾಗಿರುವ ಡಾ. ಸುಧಾ ಯಾದವ್ ಅವರು ರಸಾಯನಶಾಸ್ತ್ರದಲ್ಲಿ ಪಿಎಚ್‌ಡಿ ಪಡೆದಿದ್ದು, ಮಾಜಿ ಸಂಸದೆಯಾಗಿ ಹಾಗೂ ಬಿಜೆಪಿ ಸಂಸದೀಯ ಮಂಡಳಿಯ ಪ್ರಮುಖ ಸದಸ್ಯೆಯಾಗಿ ಸೇವೆ ಸಲ್ಲಿಸಿದ್ದಾರೆ.
ರಾಜಭವನದ ಗಾಜಿನಮನೆಯಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿರುವ ಸಮಾರಂಭದಲ್ಲಿ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳು ಪ್ರಮಾಣವಚನ ಬೋಧಿಸಲಿದ್ದಾರೆ. ಈ ಸುಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರು, ಬಿಜೆಪಿ ನಾಯಕರು ಹಾಗೂ ಪ್ರಮುಖ ಗಣ್ಯರು ಉಪಸ್ಥಿತರಿರಲಿದ್ದಾರೆ.







Comments