ಕರ್ನಾಟಕ ಎಸ್‌ಐಆರ್ ಪ್ರಕ್ರಿಯೆ ಪೂರ್ಣ: 99.32 ಲಕ್ಷ ಹೆಸರುಗಳು ಡಿಲೀಟ್!

ಬೆಂಗಳೂರು: ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿದೆ. ಈ ಪರಿಷ್ಕರಣೆಯ ನಂತರ ರಾಜ್ಯದಲ್ಲಿ ಬರೋಬ್ಬರಿ 99.32 ಲಕ್ಷ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ.
ಜೂನ್ 30ರಿಂದ ಆರಂಭಗೊಂಡ ಈ ಪ್ರಕ್ರಿಯೆಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು (BLO) ಮನೆ-ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಗೈರುಹಾಜರಿ, ಸ್ಥಳಾಂತರ, ಮರಣ ಹಾಗೂ ನಕಲಿ ದಾಖಲಾತಿಗಳ ಆಧಾರದ ಮೇಲೆ ಒಂದು ಕೋಟಿಗೂ ಹೆಚ್ಚು ಮತದಾರರನ್ನು ಗುರುತಿಸಲಾಗಿದ್ದು, 43.82 ಲಕ್ಷ ಜನರಿಗೆ ನೋಟಿಸ್ ನೀಡಲಾಗಿತ್ತು.
ಇದರಿಂದಾಗಿ ರಾಜ್ಯದ ಒಟ್ಟು ಮತದಾರರ ಸಂಖ್ಯೆ 5.54 ಕೋಟಿಯಿಂದ 4.55 ಕೋಟಿಗೆ ಕುಸಿದಿದೆ. ಅಂತಿಮ ಪಟ್ಟಿಯಲ್ಲಿ 2.29 ಕೋಟಿ ಮಹಿಳೆಯರು, 2.25 ಕೋಟಿ ಪುರುಷರು, 18-19 ವಯಸ್ಸಿನ 6.83 ಲಕ್ಷ ಯುವ ಮತದಾರರು ಹಾಗೂ 2,841 ತೃತೀಯ ಲಿಂಗಿ ಮತದಾರರಿದ್ದಾರೆ. ವಿಶೇಷವೆಂದರೆ ರಾಜ್ಯದಲ್ಲಿ ಪುರುಷರಿಗಿಂತ ಮಹಿಳಾ ಮತದಾರರ ಸಂಖ್ಯೆಯೇ ಹೆಚ್ಚಾಗಿದೆ. ಹೊಸದಾಗಿ ಸೇರ್ಪಡೆಗೊಳ್ಳಲು 10.42 ಲಕ್ಷ ಫಾರ್ಮ್-6 ಅರ್ಜಿಗಳು ಸ್ವೀಕೃತವಾಗಿವೆ.







Comments