;
top of page

ಕಾರ್ತಿಕ್ ಸುವರ್ಣ ಮೇರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Sep 22
1 min read

ಪುತ್ತೂರು: ಹಿಂದೂ ಜಾಗರಣ ವೇದಿಕೆಯ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿದ್ದ ಕಾರ್ತಿಕ್ ಸುವರ್ಣ ಮೇರ್ಲ (27) ಅವರ ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ಪ್ರಕರಣದ ಪ್ರಮುಖ ಆರೋಪಿ ಉಳ್ಳಾಲದ ಪ್ರೀತೇಶ್ ಶೆಟ್ಟಿ ಹಾಗೂ ಸಂಪ್ಯ ಪೊಲೀಸ್ ಠಾಣೆಯ ಹಿಂಭಾಗದ ನಿವಾಸಿ ಕಿರಣ್ ರೈ ಶಿಕ್ಷೆಗೆ ಗುರಿಯಾದವರು. ಮಂಗಳವಾರ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯಕ್ ಅವರು ಶಿಕ್ಷೆಯ ಪ್ರಮಾಣ ಪ್ರಕಟಿಸಿದರು.

ಇಬ್ಬರು ಆರೋಪಿಗಳಿಗೆ ತಲಾ ₹3 ಲಕ್ಷ ದಂಡವನ್ನೂ ನ್ಯಾಯಾಲಯ ವಿಧಿಸಿದೆ. ದಂಡದ ಮೊತ್ತದಲ್ಲಿ ₹5.90 ಲಕ್ಷವನ್ನು ಮೃತ ಕಾರ್ತಿಕ್ ಸುವರ್ಣ ಮೇರ್ಲ ಅವರ ತಾಯಿ ಹೇಮಾವತಿ ಅವರಿಗೆ ನೀಡುವಂತೆ ನ್ಯಾಯಾಲಯ ನಿರ್ದೇಶಿಸಿದೆ.

ಗಣೇಶೋತ್ಸವದ ಪೆಂಡಾಲ್‌ನಲ್ಲೇ ನಡೆದಿತ್ತು ಕೊಲೆ

2019ರ ಸೆಪ್ಟೆಂಬರ್ 3ರಂದು ಪುತ್ತೂರು ತಾಲೂಕಿನ ಸಂಪ್ಯದಲ್ಲಿ ಗಣೇಶೋತ್ಸವದ ಅಂಗವಾಗಿ ಹಾಕಲಾಗಿದ್ದ ಪೆಂಡಾಲ್‌ನಲ್ಲಿ ಕಾರ್ತಿಕ್ ಸುವರ್ಣ ಮೇರ್ಲ ಅವರನ್ನು ಹತ್ಯೆ ಮಾಡಲಾಗಿತ್ತು.

ಪ್ರಕರಣದ ತನಿಖೆ ಹಾಗೂ ವಿಚಾರಣೆ ಬಳಿಕ ನ್ಯಾಯಾಲಯ ಇಬ್ಬರು ಆರೋಪಿಗಳ ಮೇಲಿನ ಆರೋಪಗಳು ಸಾಬೀತಾಗಿವೆ ಎಂದು ತೀರ್ಮಾನಿಸಿತ್ತು. ಇದೀಗ ಪ್ರಕರಣದಲ್ಲಿ ಇಬ್ಬರಿಗೂ ಜೀವಾವಧಿ ಶಿಕ್ಷೆ ಪ್ರಕಟಿಸಲಾಗಿದೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

​

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page