;
top of page

ಕಾಸರಗೋಡು: ಮದುವೆ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ; ಆಘಾತ ತಾಳಲಾರದೆ ಭಾವಿ ಪತಿಯೂ ಆತ್ಮಹತ್ಯೆ

Aug 13
1 min read

ಕಾಸರಗೋಡು: ಮದುವೆಯ ಸಂಭ್ರಮಕ್ಕೆ ಸಿದ್ಧವಾಗಬೇಕಿದ್ದ ಯುವ ಜೋಡಿಯ ಬದುಕು ದುರಂತದಲ್ಲಿ ಅಂತ್ಯಗೊಂಡಿದೆ. ಎಸ್‌ಬಿಐ ಉದ್ಯೋಗಿಯಾಗಿದ್ದ ಯುವತಿ ಅನುಶ್ರೀ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ, ಆಕೆಯ ಭಾವಿ ಪತಿ ಅಮಲ್ ಕೂಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.


ಅನುಶ್ರೀ ಹುಣಸೂರಿನ ಎಸ್‌ಬಿಐ ಶಾಖೆಯಲ್ಲಿ, ಅಮಲ್ ಎರ್ನಾಕುಳಂನ ಎಸ್‌ಬಿಐ ಶಾಖೆಯಲ್ಲಿ ಉದ್ಯೋಗಿಯಾಗಿದ್ದರು. ಕುಟುಂಬಸ್ಥರ ಒಪ್ಪಿಗೆಯೊಂದಿಗೆ ಮುಂದಿನ ವರ್ಷ ಡಿಸೆಂಬರ್ 26ರಂದು ಇವರ ವಿವಾಹ ನಿಗದಿಯಾಗಿತ್ತು.

ಮಂಗಳವಾರ ಹುಣಸೂರಿನಲ್ಲಿದ್ದ ಅನುಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಸುದ್ದಿ ತಿಳಿದ ಬಳಿಕ ತೀವ್ರ ಮನನೊಂದ ಅಮಲ್ ಕೂಡ ಕೇರಳದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಒಂದೇ ದಿನದ ಅಂತರದಲ್ಲಿ ಮದುವೆಯಾಗಬೇಕಿದ್ದ ಜೋಡಿ ಶವವಾಗಿ ಪತ್ತೆಯಾಗಿರುವುದು ಎರಡೂ ಕುಟುಂಬಗಳಿಗೆ ಆಘಾತ ತಂದಿದೆ.

ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಹುಣಸೂರು ಹಾಗೂ ಕೇರಳ ಪೊಲೀಸರು ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page