;
top of page

ಕಸ್ತೂರಿ ರಂಗನ್ ವರದಿ ಜಾರಿಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ತೀವ್ರ ವಿರೋಧ

Sep 22
1 min read

​ಬೆಂಗಳೂರು: ಕಸ್ತೂರಿ ರಂಗನ್ ವರದಿ ಕುರಿತು ನಡೆದ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ , ಸುಳ್ಯ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ವರದಿಯ ಶಿಫಾರಸುಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದರು.

​ಸುಳ್ಯ ಕ್ಷೇತ್ರದ 26 ಗ್ರಾಮಗಳು ಕಸ್ತೂರಿ ರಂಗನ್ ವರದಿಯ ವ್ಯಾಪ್ತಿಗೆ ಒಳಪಡುತ್ತಿದ್ದು, ನಿಯಮಗಳ ಬಿಗಿಯಿಂದಾಗಿ ಕೃಷಿಕರು ಹಾಗೂ ಸ್ಥಳೀಯ ಜನಸಾಮಾನ್ಯರು ಭಯ ಮತ್ತು ಆತಂಕದಿಂದ ಜೀವಿಸುವಂತಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು . ಮೂಲಭೂತ ಸೌಕರ್ಯ, ಮನೆ ನಿರ್ಮಾಣ ಹಾಗೂ ಜಮೀನು ಹಕ್ಕುಗಳಿಗೆ ಈ ವರದಿ ಅಡ್ಡಿಯಾಗಿದೆ ಎಂದರು.


​ಅರಣ್ಯ, ಕಂದಾಯ ಮತ್ತು ಸರ್ವೇ ಇಲಾಖೆಗಳು ಜಂಟಿಯಾಗಿ ಗ್ರಾಮ ಮಟ್ಟದಲ್ಲಿ ಜನಪ್ರತಿನಿಧಿಗಳು ಹಾಗೂ ಸ್ಥಳೀಯರೊಂದಿಗೆ ಸಮೀಕ್ಷೆ ನಡೆಸಿ ಗಡಿ ಗುರುತಿಸಬೇಕು ಮತ್ತು ವರದಿಯನ್ನು ಮರುಪರಿಶೀಲಿಸಬೇಕು ಎಂದು ಅವರು ಸದನದಲ್ಲಿ ಆಗ್ರಹಿಸಿದರು .

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

​

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page