;
top of page

ಕೇರಳ ಕಾಂಗ್ರೆಸ್‌ನಲ್ಲಿ ಸಿಎಂ ಪಟ್ಟಕ್ಕಾಗಿ ತೀವ್ರ ಪೈಪೋಟಿ

  • May 9
  • 1 min read

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಯುಡಿಎಫ್ ಮೈತ್ರಿಕೂಟ ಭರ್ಜರಿ ಜಯ ದಾಖಲಿಸಿದ್ದರೂ, ಮುಖ್ಯಮಂತ್ರಿ ಆಯ್ಕೆ ಕಾಂಗ್ರೆಸ್‌ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಕೆ.ಸಿ. ವೇಣುಗೋಪಾಲ್, ವಿ.ಡಿ. ಸತೀಶನ್, ರಮೇಶ್ ಚೆನ್ನಿತ್ತಲ ಮತ್ತು ಸನ್ನಿ ಜೋಸೆಫ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಯಾರನ್ನು ಆಯ್ಕೆ ಮಾಡಿದರೂ ಬಣ ರಾಜಕೀಯ ಸ್ಫೋಟಗೊಳ್ಳುವ ಭೀತಿ ಎದುರಾಗಿದೆ.

ಇನ್ನೊಂದೆಡೆ, ಶಾಸಕರ ಅಭಿಪ್ರಾಯ ಸಂಗ್ರಹದ ರಹಸ್ಯ ಪಟ್ಟಿ ಸಾಮಾಜಿಕ ಜಾಲತಾಣಗಳಲ್ಲಿ ಸೋರಿಕೆಯಾಗಿರುವುದು ಪಕ್ಷದೊಳಗೆ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ಪಟ್ಟಿಯಲ್ಲಿ ಹೆಚ್ಚಿನ ಶಾಸಕರು ಕೆ.ಸಿ. ವೇಣುಗೋಪಾಲ್ ಪರ ಒಲವು ತೋರಿರುವುದು ಬಹಿರಂಗವಾಗಿದ್ದು, ಶಿಸ್ತು ಉಲ್ಲಂಘನೆಯ ಕುರಿತು ಚರ್ಚೆಗಳು ಆರಂಭವಾಗಿವೆ.

ಕರ್ನಾಟಕದ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವಿನ ಮುಸುಕಿನ ಗುದ್ದಾಟದ ಮಾದರಿಯಲ್ಲೇ ಈಗ ಕೇರಳದಲ್ಲೂ ಅಧಿಕಾರಕ್ಕಾಗಿ ಕಚ್ಚಾಟ ಶುರುವಾಗಿದೆ. ವೀಕ್ಷಕರ ವರದಿಯ ಆಧಾರದ ಮೇಲೆ ಹೈಕಮಾಂಡ್ ಇಂದು ಅಂತಿಮ ನಿರ್ಧಾರ ಪ್ರಕಟಿಸಲಿದ್ದು, ಸೋಮವಾರ ತಿರುವನಂತಪುರಂನಲ್ಲಿ ನೂತನ ಸಿಎಂ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page