;
top of page

ದಶಕದ ಬಳಿಕ ಕೇರಳದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ: ಮುಖ್ಯಮಂತ್ರಿ ಆಗಿ ವಿ.ಡಿ ಸತೀಶನ್ ಪ್ರಮಾಣವಚನ

  • May 18
  • 1 min read

ತಿರುವನಂತಪುರಂ: ದಶಕದ ಬಳಿಕ ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ವಿ.ಡಿ ಸತೀಶನ್ ಅವರು ಸೋಮವಾರ ಕೇರಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ತಿರುವನಂತಪುರಂನ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ಆರ್.ವಿ. ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಸತೀಶನ್ ಹಾಗೂ 20 ಮಂದಿ ಸಚಿವರಿಗೆ ಪ್ರಮಾಣವಚನ ಬೋಧಿಸಿದರು.

ಪ್ರಮಾಣವಚನ ಸಮಾರಂಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ, ಡಿಕೆ ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಕೆಸಿ ವೇಣುಗೋಪಾಲ್, ರಾಜೀವ್ ಚಂದ್ರಶೇಖರ್ ಹಾಗೂ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

ನೂತನ ಸಂಪುಟದಲ್ಲಿ ಕಾಂಗ್ರೆಸ್ ಪಕ್ಷದ 11 ಮಂದಿ ಶಾಸಕರು ಸಚಿವ ಸ್ಥಾನ ಪಡೆದಿದ್ದಾರೆ. ಭಾರತೀಯ ಯೂನಿಯನ್ ಮುಸ್ಲಿಂ ಲೀಗ್ (IUML) ಪಕ್ಷದ ಐವರು ಸಚಿವರಾಗಿದ್ದು, ಕೇರಳ ಕಾಂಗ್ರೆಸ್-ಜೋಸೆಫ್, ಕೇರಳ ಕಾಂಗ್ರೆಸ್-ಜೇಕಬ್, ಆರ್‌ಎಸ್‌ಪಿ ಹಾಗೂ ಸಿಎಂಪಿ ಪಕ್ಷಗಳಿಗೆ ತಲಾ ಒಂದು ಸಚಿವ ಸ್ಥಾನ ಲಭಿಸಿದೆ.

ಕಾಂಗ್ರೆಸ್ ಪರವಾಗಿ ರಮೇಶ್ ಚೆನ್ನಿತ್ತಲ, ಸನ್ನಿ ಜೋಸೆಫ್, ಕೆ. ಮುರಳೀಧರನ್, ಎ.ಪಿ ಅನಿಲ್ ಕುಮಾರ್, ಪಿ.ಸಿ ವಿಷ್ಣುನಾಥ್, ಬಿಂಧು ಕೃಷ್ಣ, ಎಂ ಲಿಜ್ಜು, ಟಿ ಸಿದ್ದಿಕ್, ರೋಜಿ ಎಂ ಜಾನ್, ಕೆ.ಎ ತುಳಸಿ ಮತ್ತು ಒ.ಜೆ ಜನೀಶ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಇನ್ನು ಐಯುಎಂಎಲ್ ಪಕ್ಷದಿಂದ ಪಿ.ಕೆ ಕುನ್ಹಾಲಿಕುಟ್ಟಿ, ಕೆ.ಎಂ ಶಾಜಿ, ಎನ್ ಶಂಸುದ್ದೀನ್, ಪಿ.ಕೆ ಬಶೀರ್ ಹಾಗೂ ವಿ.ಇ ಅಬ್ದುಲ್ ಗಫೂರ್ ಸಚಿವ ಸಂಪುಟ ಸೇರಿದ್ದಾರೆ. ಜೊತೆಗೆ ಮಾನ್ಸ್ ಜೋಸೆಫ್, ಅನೂಪ್ ಜೇಕಬ್, ಶಿಬು ಬೇಬಿ ಜಾನ್ ಹಾಗೂ ಸಿಪಿ ಜಾನ್ ಕೂಡ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page