;
top of page

ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶವವಾಗಿ ಪತ್ತೆ

  • Apr 10
  • 1 min read

ಖಾಸಗಿ ಪ್ರವಾಸಕ್ಕಾಗಿ ಕೇರಳದಿಂದ ಚಿಕ್ಕಮಗಳೂರಿಗೆ ಬಂದಿದ್ದ 14 ವರ್ಷದ ಬಾಲಕಿ ಶ್ರೀನಂದಾ ಅವರ ಮೃತದೇಹ ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಬಳಿಯ 2000 ಅಡಿ ಆಳದ ಪ್ರಪಾತದಲ್ಲಿ ಇಂದು ಪತ್ತೆಯಾಗಿದೆ. ಏಪ್ರಿಲ್ 7ರಂದು ಪ್ರವಾಸಿಗರ ತಂಡದೊಂದಿಗೆ ಆಗಮಿಸಿದ್ದ ಬಾಲಕಿ, ದತ್ತಪೀಠ ವೀಕ್ಷಣೆ ವೇಳೆ ಹಠಾತ್ತಾಗಿ ನಾಪತ್ತೆಯಾಗಿದ್ದರು.

ಬಾಲಕಿಯ ಪತ್ತೆಗಾಗಿ ಎಸ್‌ಡಿಆರ್‌ಎಫ್, ಪೊಲೀಸ್ ಮತ್ತು ಎಎನ್‌ಎಫ್ ತಂಡಗಳು ಡ್ರೋನ್ ಹಾಗೂ ಥರ್ಮಲ್ ಕ್ಯಾಮೆರಾಗಳನ್ನು ಬಳಸಿ ತೀವ್ರ ಶೋಧ ನಡೆಸಿದ್ದವು. ಕಡಿದಾದ ಪರ್ವತ ಪ್ರದೇಶದಲ್ಲಿ ಮೂರು ದಿನಗಳ ಸತತ ಕಾರ್ಯಾಚರಣೆಯ ನಂತರ ಇಂದು ಮೃತದೇಹ ಪತ್ತೆಯಾಗಿದ್ದು, ಘಟನೆ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page