ಕೇರಳದಲ್ಲಿ ಮತ್ತೆ ಮಳೆ ಆರ್ಭಟ: ದಿಢೀರ್ ಪ್ರವಾಹ, ಭೂಕುಸಿತಕ್ಕೆ ಐವರು ಬಲಿ

ಕೇರಳದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ದಿಢೀರ್ ಪ್ರವಾಹ ಹಾಗೂ ಭೂಕುಸಿತಗಳಿಗೆ ಭಾನುವಾರ ಕನಿಷ್ಠ ಐವರು ಮೃತಪಟ್ಟಿದ್ದಾರೆ. ಇಬ್ಬರು ನಾಪತ್ತೆಯಾಗಿದ್ದು, ಹಲವರು ಗಾಯಗೊಂಡಿದ್ದಾರೆ.
ಮಲಪ್ಪುರಂನ ಕೊಟ್ಟಪುಳ ನದಿಯಲ್ಲಿ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿ ಸ್ನಾನಕ್ಕಿಳಿದಿದ್ದ ಇಬ್ಬರು ಕೊಚ್ಚಿಹೋಗಿ ಮೃತಪಟ್ಟರೆ, ಇನ್ನಿಬ್ಬರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಕೊಟ್ಟಾಯಂನ ಟೀಕೋಯ್ ಬಳಿ ಸಂಭವಿಸಿದ ಭೂಕುಸಿತಕ್ಕೆ ಚೆನ್ನೈ ಮೂಲದ ಪ್ರವಾಸಿಗ ಬಲಿಯಾಗಿದ್ದಾರೆ. ಇಡುಕ್ಕಿಯ ಕೊಟ್ಟಕಂಬೂರಿನಲ್ಲಿ ರಸ್ತೆಬದಿಯ ಶೆಡ್ ಮೇಲೆ ಬೆಟ್ಟ ಕುಸಿದು ಬಿದ್ದು ಇಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ಪರಿಸ್ಥಿತಿ ಭೀಕರವಾಗಿರುವ ಹಿನ್ನೆಲೆಯಲ್ಲಿ ಇಡುಕ್ಕಿ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಎಸ್‌ಎಂಎಸ್ ಮೂಲಕ ಮುನ್ನೆಚ್ಚರಿಕೆ ರವಾನಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಗೆ ವಿಪತ್ತು ನಿರ್ವಹಣಾ ಪಡೆಗಳನ್ನು ನಿಯೋಜಿಸಲಾಗಿದ್ದು, ಸೂಕ್ಷ್ಮ ಪ್ರದೇಶಗಳ ಜನರನ್ನು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಮುಖ್ಯಮಂತ್ರಿ ಕಚೇರಿ ಸೂಚನೆ ನೀಡಿದೆ.







Comments