ಕೆಲಿಂಜ ಸರ್ಕಾರಿ ಶಾಲೆಯಲ್ಲಿ ಗಣರಾಜ್ಯೋತ್ಸವದ ಸಡಗರ: ರಾಷ್ಟ್ರಧ್ವಜಕ್ಕೆ ಗೌರವ ನಮನ


ದ. ಕ.ಪಂ. ಹಿ. ಪ್ರಾ. ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಇಂದು ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಶಾಲಾ ಆವರಣದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (SDMC) ಅಧ್ಯಕ್ಷರಾದ ಮೋಹಿತ್ ಶೆಟ್ಟಿ ಅವರು ಧ್ವಜಾರೋಹಣ ನೆರವೇರಿಸಿ, ವಿದ್ಯಾರ್ಥಿಗಳಿಗೆ ಸಂವಿಧಾನದ ಮಹತ್ವ ಹಾಗೂ ರಾಷ್ಟ್ರಪ್ರೇಮದ ಬಗ್ಗೆ ಸಂದೇಶ ನೀಡಿದರು.
ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಉಪಾಧ್ಯಕ್ಷೆ ಜಯಂತಿ, ಶಾಲಾ ಮುಖ್ಯೋಪಾಧ್ಯಾಯರು, ಕ್ಲಸ್ಟರ್ ಸಿಆರ್‌ಪಿ ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಅಲ್ಲದೆ ಪಂಚಾಯತ್ ಸದಸ್ಯರಾದ ಪ್ರಸಾದ್ ಮತ್ತು ಸಂದೀಪ್, ಎಸ್‌ಡಿಎಂಸಿ ಸದಸ್ಯರು ಹಾಗೂ ಗ್ರಾಮಸ್ಥರು ಪಾಲ್ಗೊಂಡು ಕಾರ್ಯಕ್ರಮಕ್ಕೆ ಕಳೆ ನೀಡಿದರು. ದೇಶದ ಸಂವಿಧಾನ ಜಾರಿಗೆ ಬಂದ ಈ ಐತಿಹಾಸಿಕ ದಿನದ ನೆನಪಿಗಾಗಿ ಮಕ್ಕಳು ದೇಶಭಕ್ತಿ ಗೀತೆಗಳನ್ನು ಹಾಡಿ ಸಂಭ್ರಮಿಸಿದರು







Comments