ಕೆಯ್ಯರಿನಲ್ಲಿ ಭೀಕರ ಅಪಘಾತ: KSRTC ಬಸ್–ಬೈಕ್ ಮುಖಾಮುಖಿ ಡಿಕ್ಕಿ, ಸವಾರ ಸ್ಥಳದಲ್ಲೇ ಮೃತ್ಯು

ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ ನೆಲ್ಲಿಗುರಿ ಬಳಿ ಇಂದು (ಆ.15) KSRTC ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಾಡಾವು ಕಟ್ಟೆಯಿಂದ ಸವಣೂರು ಕಡೆಗೆ ತೆರಳುತ್ತಿದ್ದ KSRTC ಬಸ್ ಹಾಗೂ ಸವಣೂರಿನಿಂದ ಪುತ್ತೂರು ಕಡೆಗೆ ಸಾಗುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಬೈಕ್ ಸವಾರ ಕುಮಾರಮಂಗಿಲ ಸಮೀಪದ ಬಂಬಿಲ ನಿವಾಸಿ ಅಭಿಲಾಷ್ (24) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯ ಬಳಿಕ ಸ್ಥಳದಲ್ಲಿ ಜನರು ಜಮಾಯಿಸಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮೃತರು ತಂದೆ, ತಾಯಿ ಹಾಗೂ ಅಣ್ಣನನ್ನು ಅಗಲಿದ್ದಾರೆ.
ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪುತ್ತೂರು ಪೊಲೀಸರು ಪರಿಶೀಲನೆ ನಡೆಸಿ, ಘಟನೆ ಕುರಿತು ಮುಂದಿನ ಕ್ರಮ ಕೈಗೊಂಡಿದ್ದಾರೆ.







Comments