ಕೊಡಗಿನಲ್ಲಿ ರಾಸಲೀಲೆ ಪ್ರಕರಣದ ಸಂಚಲನ: ರಾಜಕಾರಣಿಗಳ ಪುತ್ರಿಯರ ವಿಡಿಯೋ ವೈರಲ್ ಮಾಡಿದ ಯುವಕನ ಬಂಧನ!
- sathyapathanewsplu
- 4 hours ago
- 1 min read

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಯುವಕನೊಬ್ಬ ರಾಜಕಾರಣಿಗಳ ಪುತ್ರಿಯರು ಸೇರಿದಂತೆ ಹಲವು ಯುವತಿಯರೊಂದಿಗೆ ರಾಸಲೀಲೆ ನಡೆಸಿ, ಅದರ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿರುವ ಘಟನೆ ರಾಜ್ಯಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಆರೋಪಿಯನ್ನು ಬೆಂಗಳೂರಿನ ಸಂಪಿಗೆಹಳ್ಳಿಯ ಯನಪೋಯ ಕಾಲೇಜಿನ ಬಿಬಿಎಂ ವಿದ್ಯಾರ್ಥಿ ಮೊಹಮ್ಮದ್ ಸವದ್ ಎಂದು ಗುರುತಿಸಲಾಗಿದ್ದು, ಈತನ ಕೃತ್ಯ ಜಿಲ್ಲೆಯಾದ್ಯಂತ ಸಂಚಲನ ಸೃಷ್ಟಿಸಿದೆ. ವಿದ್ಯಾರ್ಥಿ ದಿಸೆಯಲ್ಲೇ ಯುವತಿಯರನ್ನು ಪುಸಲಾಯಿಸಿ ಕಾಮಕೇಳಿ ನಡೆಸುತ್ತಿದ್ದ ಈತನ ಈ ವಿಕೃತ ಮನಸ್ಥಿತಿ ಈಗ ಪೊಲೀಸ್ ಮೆಟ್ಟಿಲೇರಿದೆ.
ಆರೋಪಿ ಮೊಹಮ್ಮದ್ ಸವದ್ ಯುವತಿಯರನ್ನು ವಿವಿಧೆಡೆ ಕರೆದೊಯ್ದು ರಾಸಲೀಲೆ ನಡೆಸುತ್ತಿದ್ದಲ್ಲದೆ, ಆ ದೃಶ್ಯಗಳನ್ನು ತನ್ನ ಮೊಬೈಲ್‌ನಲ್ಲಿ ಸ್ವತಃ ಚಿತ್ರೀಕರಿಸಿಕೊಳ್ಳುತ್ತಿದ್ದ ಎಂದು ತಿಳಿದುಬಂದಿದೆ. ಬಳಿಕ ಈ ಖಾಸಗಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವ ಮೂಲಕ ಯುವತಿಯರ ಗೌರವಕ್ಕೆ ಧಕ್ಕೆ ತಂದಿದ್ದಾನೆ. ವೈರಲ್ ಆಗಿರುವ ವಿಡಿಯೋಗಳಲ್ಲಿ ಅನ್ಯ ಧರ್ಮದ ಯುವತಿಯರು ಹಾಗೂ ಜಿಲ್ಲಾ ಮಟ್ಟದ ಪ್ರಭಾವಿ ರಾಜಕೀಯ ಮುಖಂಡರ ಪುತ್ರಿಯರು ಇದ್ದಾರೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದು, ಪ್ರಕರಣಕ್ಕೆ ಹೊಸ ತಿರುವು ಲಭಿಸಿದೆ.
ಘಟನೆ ಸಂಬಂಧ ಕೊಡಗು ಅಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಸನ್ನ ಭಟ್ ಅವರು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು ತಕ್ಷಣವೇ ಆರೋಪಿ ಮೊಹಮ್ಮದ್ ಸವದ್‌ನನ್ನು ಬಂಧಿಸಿದ್ದು, ಆತನ ಮೊಬೈಲ್ ಸೇರಿದಂತೆ ಇತರ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಸದ್ಯ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಇದರ ಹಿಂದೆ ಇನ್ಯಾರಾದರೂ ಕೈವಾಡವಿದೆಯೇ ಅಥವಾ ಬ್ಲ್ಯಾಕ್‌ಮೇಲ್ ತಂತ್ರ ಅಡಗಿದೆಯೇ ಎಂಬ ನಿಟ್ಟಿನಲ್ಲಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.






Comments