;
top of page

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಭೇಟಿ*

  • Jun 12
  • 1 min read

ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಜೂನ್ 12ರಂದು ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ. ಸಿಎಂ ಭೇಟಿ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪೊಲೀಸರು ಸೂಕ್ತ ಬಂದೋಬಸ್ತ್ ಕೈಗೊಂಡಿದ್ದು, ಸಾರ್ವಜನಿಕರಿಗೆ ಕೆಲವು ಪ್ರಮುಖ ಸೂಚನೆಗಳನ್ನು ನೀಡಿದ್ದಾರೆ.

ವಿಶೇಷ ಬಂದೋಬಸ್ತ್ ಇರುವ ಕಾರಣ ಮಧ್ಯಾಹ್ನ 12 ರಿಂದ ಸಂಜೆ 5 ಗಂಟೆಯವರೆಗೆ ಭಕ್ತರು ದರ್ಶನ ತಪ್ಪಿಸುವುದು ಸೂಕ್ತ ಎಂದು ಪೊಲೀಸರು ತಿಳಿಸಿದ್ದಾರೆ. ಭಕ್ತರಿಗೆ ಪ್ರವೇಶ ನಿಷೇಧವಿಲ್ಲದಿದ್ದರೂ, ಭದ್ರತೆಯ ದೃಷ್ಟಿಯಿಂದ ದರ್ಶನದ ವೇಳೆ ಅನಾನುಕೂಲವಾಗಬಹುದು ಎಂದು ಪ್ರಕಟಣೆಯಲ್ಲಿ ಕೋರಲಾಗಿದೆ.

ಈ ಹಿಂದೆ ತಮಿಳುನಾಡಿನ ಮುಖ್ಯಮಂತ್ರಿಗಳಾಗಿದ್ದ ಎಂಜಿಆರ್ ಮತ್ತು ಜಯಲಲಿತಾ ಅವರು ಕೊಲ್ಲೂರು ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಇದೀಗ ನೂತನ ಸಿಎಂ ಜೋಸೆಫ್ ವಿಜಯ್ ಅವರು ಮೂಕಾಂಬಿಕೆಯ ದರ್ಶನ ಪಡೆಯುತ್ತಿರುವ ತಮಿಳುನಾಡಿನ ಮೂರನೇ ಮುಖ್ಯಮಂತ್ರಿಯಾಗಲಿದ್ದಾರೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page