;
top of page

ಕೆಎಸ್‌ಆರ್‌ಪಿ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ: ನಾಳೆ ಕೆಇಎಯಿಂದ ಲಿಖಿತ ಪರೀಕ್ಷೆ; ಬಿಗಿ ಭದ್ರತೆ

Sep 19
1 min read

ಬೆಂಗಳೂರು: ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (KSRP) ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಸೆಪ್ಟೆಂಬರ್ 20ರಂದು ರಾಜ್ಯಾದ್ಯಂತ ಲಿಖಿತ ಪರೀಕ್ಷೆ ನಡೆಸಲಿದ್ದು, ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಂಡಿದೆ.

ಮಿಕ್ಕುಳಿದ ವೃಂದದ ಅಭ್ಯರ್ಥಿಗಳಿಗೆ 8 ಜಿಲ್ಲೆಗಳ 333 ಕೇಂದ್ರಗಳಲ್ಲಿ ಬೆಳಿಗ್ಗೆ 10:30ಕ್ಕೆ ಹಾಗೂ ಕಲ್ಯಾಣ ಕರ್ನಾಟಕ ವೃಂದದವರಿಗೆ 4 ಜಿಲ್ಲೆಗಳ 85 ಕೇಂದ್ರಗಳಲ್ಲಿ ಮಧ್ಯಾಹ್ನ 3 ಗಂಟೆಗೆ ಪರೀಕ್ಷೆ ನಡೆಯಲಿದೆ. ಒಟ್ಟು 1,81,244 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು KEA ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

ಪರೀಕ್ಷಾ ಅಕ್ರಮ ತಡೆಯಲು ಕಟ್ಟುನಿಟ್ಟಿನ ವಸ್ತ್ರಸಂಹಿತೆ, ಸಿಸಿಟಿವಿ ಕಣ್ಗಾವಲು ಹಾಗೂ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದ್ದು, ಅಭ್ಯರ್ಥಿಗಳು ಯಾವುದೇ ಅಕ್ರಮಕ್ಕೆ ಆಸ್ಪದ ನೀಡದೆ ಎಚ್ಚರಿಕೆಯಿಂದ ಪರೀಕ್ಷೆ ಎದುರಿಸುವಂತೆ ಸೂಚಿಸಲಾಗಿದೆ.


 
 
 

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

​

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page