ಚಿಕ್ಕಮಗಳೂರು: ವಿದ್ಯುತ್ ಕಂಬಕ್ಕೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ; 8 ಪ್ರಯಾಣಿಕರಿಗೆ ಗಾಯ

ಚಿಕ್ಕಮಗಳೂರಿನ ಕೊಡಾಳ್ ಸಮೀಪ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಕುಕ್ಕನೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಈ ಬಸ್ಸಿನಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರಿದ್ದರು.

ಅಪಘಾತದಲ್ಲಿ ಗಾಯಗೊಂಡ ಎಂಟು ಮಂದಿಯನ್ನು ತಕ್ಷಣ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.







Comments