ಕುಕ್ಕೆ ಸುಬ್ರಹ್ಮಣ್ಯ: ₹603 ಕೋಟಿ ಮಾಸ್ಟರ್ ಪ್ಲಾನ್ ಕಾಮಗಾರಿಗೆ ವೇಗ ನೀಡಲು ಅಪರ ಮುಖ್ಯ ಕಾರ್ಯದರ್ಶಿ ಸೂಚನೆ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ಸೆ.20 ರಂದು ಭೇಟಿ ನೀಡಿದ ಕಂದಾಯ ಹಾಗೂ ಮುಜರಾಯಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ, ದೇವಾಲಯದ ಆಡಳಿತ ಮಂಡಳಿ ಮತ್ತು ಮಾಸ್ಟರ್ ಪ್ಲಾನ್ ಸದಸ್ಯರೊಂದಿಗೆ ಮಹತ್ವದ ಸಭೆ ನಡೆಸಿದರು.
ಕ್ಯಾಬಿನೆಟ್ ಅನುಮೋದನೆ ಪಡೆದಿರುವ ₹603 ಕೋಟಿ ವೆಚ್ಚದ ಮಾಸ್ಟರ್ ಪ್ಲಾನ್ ಯೋಜನೆಯನ್ನು ಶೀಘ್ರವಾಗಿ ಜಾರಿಗೊಳಿಸುವಂತೆ ಅವರು ಖಡಕ್ ಸೂಚನೆ ನೀಡಿದರು. ಮುಂದಿನ ಹಂತದಲ್ಲಿ ಶಿಕ್ಷಣ, ಆರೋಗ್ಯ, ಮೂಲಭೂತ ಸೌಕರ್ಯ, ಚಿನ್ನ-ಬೆಳ್ಳಿ ಭದ್ರತೆ ಹಾಗೂ ಭಕ್ತರ ದರ್ಶನದ ವೇಳೆ ನೂಕುನುಗ್ಗಲು ತಡೆಯಲು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶಿಸಿದರು.
ಸಭೆಯಲ್ಲಿ ಮುಜರಾಯಿ ಆಯುಕ್ತ ಶರತ್ ಕುಮಾರ್, ಎಸ್‌ಪಿ ಡಾ. ಅರುಣ್, ಅಧ್ಯಕ್ಷ ಹರೀಶ್ ಇಂಜಾಡಿ, ಇಒ ಅರವಿಂದ ಅಯ್ಯಪ್ಪ ಸುತಗುಂಡಿ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.







Comments