ಕುಕ್ಕೆ ಸುಬ್ರಹ್ಮಣ್ಯ ಪ್ರಾಧಿಕಾರ ರಚನೆಗೆ ವಿರೋಧ: ಜನಾಂದೋಲನಕ್ಕೆ ಸಿದ್ಧತೆ
- Mar 18
- 1 min read

ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಪ್ರಾಧಿಕಾರ ರಚಿಸುವ ಸರ್ಕಾರದ ನಿರ್ಧಾರಕ್ಕೆ ಸ್ಥಳೀಯರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಹೋರಾಟ ತೀವ್ರಗೊಂಡಿದೆ. ಮಾರ್ಚ್ 17ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಶಿವರಾಮ ಮತ್ತು ಇತರ ಪ್ರಮುಖರು ಭಾಗವಹಿಸಿ, ಈ ನಿರ್ಧಾರವು ದೇವಾಲಯದ ಸ್ವಾಯತ್ತತೆ ಹಾಗೂ ಸ್ಥಳೀಯರ ಹಿತಾಸಕ್ತಿಗೆ ಮಾರಕ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಾಧಿಕಾರ ರಚನೆಯ ವಿರುದ್ಧ ಸಂಘಟಿತ ಹೋರಾಟ ರೂಪಿಸಲು ನಿರ್ಧರಿಸಲಾಗಿದ್ದು, ಮಾರ್ಚ್ 19ರಂದು ಬೃಹತ್ ಸಾರ್ವಜನಿಕ ಸಭೆಯನ್ನು ಆಯೋಜಿಸಲಾಗಿದೆ. ಈ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಸರ್ಕಾರದ ಮೇಲೆ ಒತ್ತಡ ಹೇರಬೇಕೆಂದು ಸಭೆಯಲ್ಲಿದ್ದ ಗಣ್ಯರು ಕರೆ ನೀಡಿದ್ದಾರೆ.







Comments