;
top of page

ಕುಕ್ಕೆ ಸುಬ್ರಹ್ಮಣ್ಯಕ್ಕೆ ಹರಿದುಬಂದ ಭಕ್ತ ಸಾಗರ: ರಜೆ ಹಿನ್ನೆಲೆ ವಿವಿಧ ಸೇವೆಗಳಿಗಾಗಿ ಭಕ್ತರ ದಂಡು

  • Apr 4
  • 1 min read

ಸರ್ಕಾರಿ ರಜೆಯ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭಕ್ತರ ಸಾಗರವೇ ಹರಿದುಬಂದಿದೆ. ಹೊರರಾಜ್ಯ ಹಾಗೂ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಸಾವಿರಾರು ಭಕ್ತರು ಸರ್ಪಸಂಸ್ಕಾರ, ಆಶ್ಲೇಷ ಬಲಿ ಸೇರಿದಂತೆ ವಿವಿಧ ಸೇವೆಗಳನ್ನು ನೆರವೇರಿಸಿ ಪುನೀತರಾದರು. ಭಕ್ತರ ದಟ್ಟಣೆಯಿಂದಾಗಿ ನಾಗಪ್ರತಿಷ್ಠಾ ಮಂಟಪ ಹಾಗೂ ಹೊರಾಂಗಣದಲ್ಲಿ ಜನವೋ ಜನ ತುಂಬಿದ್ದರು.

ಭಕ್ತರ ಅನುಕೂಲಕ್ಕಾಗಿ ದೇವಳದ ಮಂಡಳಿ ಮತ್ತು ಪೊಲೀಸ್ ಇಲಾಖೆ ವಾಹನ ಪಾರ್ಕಿಂಗ್ ಹಾಗೂ ದರ್ಶನಕ್ಕೆ ಬಿಗಿ ವ್ಯವಸ್ಥೆ ಮಾಡಿತ್ತು. ಮುಂದಿನ ದಿನಗಳಲ್ಲೂ ಸತತ ರಜೆ ಇರುವುದರಿಂದ ಭಕ್ತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದ್ದು, ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page