ಕುಮಾರ ಪರ್ವತ ಚಾರಣ ಸಮಯ ಬದಲಾವಣೆ
- Mar 13
- 1 min read

ಕುಮಾರ ಪರ್ವತ ಚಾರಣವನ್ನು ಮೊದಲಿನಂತೆ ಬೆಳಿಗ್ಗೆ 5:30ಕ್ಕೆ ಆರಂಭಿಸಲು ಅವಕಾಶ ನೀಡಬೇಕೆಂದು ಶಾಸಕಿ ಭಾಗೀರಥಿ ಮುರುಳ್ಯ ವಿಧಾನಸಭೆಯಲ್ಲಿ ಆಗ್ರಹಿಸಿದ್ದಾರೆ. ಪ್ರಸ್ತುತ ಬೆಳಿಗ್ಗೆ 6 ಗಂಟೆಗೆ ಚಾರಣಕ್ಕೆ ಬಿಡುತ್ತಿರುವುದರಿಂದ ಶಿಖರ ತಲುಪಲು ವಿಳಂಬವಾಗುತ್ತಿದೆ ಎಂದು ಅವರು ಸರ್ಕಾರದ ಗಮನ ಸೆಳೆದರು.

ಈ ಮನವಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಪೂರಕವಾಗಿ ಸ್ಪಂದಿಸಿದ್ದು, ಚಾರಣಿಗರ ಹಿತದೃಷ್ಟಿಯಿಂದ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಶೇಷಗಿರಿ ಪರ್ವತಕ್ಕೆ ಹೋಗಲು ಇರುವ ನಿರ್ಬಂಧ ತೆರವುಗೊಳಿಸಿ ಹಳೆಯ ವ್ಯವಸ್ಥೆಯನ್ನೇ ಮುಂದುವರಿಸುವಂತೆ ಶಾಸಕರು ಸದನದಲ್ಲಿ ಒತ್ತಾಯಿಸಿದರು.







Comments