ಕುಂಡಡ್ಕ ಫಾಲ್ಸ್ ಪ್ರಕರಣ: ಹಿಂದೂಪರ ಸಂಘಟನೆ ಕಾರ್ಯಕರ್ತರ ಮೇಲಿನ ಮೊಕದ್ದಮೆಗೆ ಹೈಕೋರ್ಟ್ ತಡೆ

ಕಡಬ: ತಾಲೂಕಿನ ಬಂಟ್ರ ಗ್ರಾಮದ ಮರ್ದಾಳ ಕುಂಡಡ್ಕ ಫಾಲ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ.

ಈ ಪ್ರಕರಣದಲ್ಲಿ ದಲಿತ ದೌರ್ಜನ್ಯ ತಡೆ ಕಾಯ್ದೆಯನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ವಿಶೇಷವಾಗಿ, ಹಿಂದೂಪರ ಸಂಘಟನೆಯಲ್ಲಿದ್ದ ದಲಿತ ಸಮುದಾಯದ ಕಾರ್ಯಕರ್ತನ ಮೇಲೆಯೇ ಈ ಕಾಯ್ದೆಯಡಿ ದೂರು ದಾಖಲಾಗಿರುವುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು.
ಈ ಹಿನ್ನೆಲೆಯಲ್ಲಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು. ಹಿರಿಯ ನ್ಯಾಯವಾದಿ ಡಾ. ಅರುಣ್ ಶ್ಯಾಮ್ ಮಂಡಿಸಿದ ವಾದವನ್ನು ಆಲಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಪ್ರಕರಣದ ತನಿಖೆಗೆ ತಡೆ ನೀಡಿ ಮಹತ್ವದ ಆದೇಶ ಹೊರಡಿಸಿದೆ. ಅರ್ಜಿದಾರರ ಪರವಾಗಿ ಸುಯೋಗ್ ಹೇರಳೆ ವಕಾಲತ್ತು ವಹಿಸಿದ್ದರು.







Comments