;
top of page

ಲಾಲ್‌ಬಾಗ್ ಸಿಗ್ನಲ್ ಬಳಿ ಬೈಕ್ ಸವಾರನ ಮೇಲೆ ಮಚ್ಚಿನಿಂದ ಭೀಕರ ಹಲ್ಲೆ: ಗಂಭೀರ ಗಾಯ

Jul 25
1 min read

ಮಂಗಳೂರು: ನಗರದ ಪ್ರಮುಖ ವಲಯವಾದ ಲಾಲ್‌ಬಾಗ್ ಸಿಗ್ನಲ್ ಸಮೀಪ, ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ದುಷ್ಕರ್ಮಿಯೊಬ್ಬ ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.

​ಘಟನೆಯಲ್ಲಿ ಗಾಯಗೊಂಡ ಯುವಕನನ್ನು ಪ್ರಾಥಮಿಕವಾಗಿ ವಿಕ್ಕಿ ಬಪ್ಪಾಲ್ ಎಂದು ಗುರುತಿಸಲಾಗಿದೆ. ಇಂದು ಮಧ್ಯಾಹ್ನ ಸುಮಾರು 1:45 ರ ಸುಮಾರಿಗೆ ಅವರು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಈ ಕೃತ್ಯ ನಡೆದಿದೆ.


​ಪ್ರತ್ಯಕ್ಷದರ್ಶಿಗಳ ಮಾಹಿತಿ ಪ್ರಕಾರ, ಗಾಯಾಳುವನ್ನು ಹಿಂಬಾಲಿಸಿಕೊಂಡು ಬಂದ ಏಕಾಂಗಿ ಬೈಕ್‌ ಸವಾರನೊಬ್ಬ, ಚಲಿಸುತ್ತಿದ್ದಂತೆಯೇ ಅವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಹಲ್ಲೆಯ ತೀವ್ರತೆಗೆ ಬೈಕ್ ಸವಾರನ ಕುತ್ತಿಗೆಯ ಭಾಗಕ್ಕೆ ಆಳವಾದ ಗಾಯವಾಗಿದ್ದು, ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಗಾಯಾಳು ಆಸ್ಪತ್ರೆಯಲ್ಲಿ ತೀವ್ರ ನಿಗಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


​ದಿನದ ರಭಸದ ಸಂಚಾರದ ವೇಳೆಯೇ ನಡೆದ ಈ ಹಲ್ಲೆ ಪ್ರಕರಣವು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಾಗಿ ನಗರದಾದ್ಯಂತ ತೀವ್ರ ಶೋಧ ಕಾರ್ಯ ಮುಂದುವರೆದಿದೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page