;
top of page

ವಿದ್ಯುತ್ ಸ್ಪರ್ಶಿಸಿ ಲೈನ್‌ಮ್ಯಾನ್ ರವಿ ಗೌಡ ದಾರುಣ ಸಾವು

Oct 4
1 min read

ಕೆದಿಲದಲ್ಲಿ ಶನಿವಾರ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಲೈನ್‌ಮ್ಯಾನ್ ಸಾವನ್ನಪ್ಪಿದ ದಾರುಣ ಘಟನೆ ಸಂಭವಿಸಿದೆ.

ಮೃತರನ್ನು ಕೆಮ್ಮಾಯಿ ನಿವಾಸಿ ರವಿ ಗೌಡ ಎಂದು ಗುರುತಿಸಲಾಗಿದೆ. ಅವರು ಕೆದಿಲ, ಪಾಟ್ರಕೋಡಿ, ಮಿತ್ತೂರು ಮತ್ತು ಗಡಿಯಾರ ಭಾಗಗಳಲ್ಲಿ ಸೇವೆಯಲ್ಲಿದ್ದರು. ಯಾವುದೇ ವಿದ್ಯುತ್ ದೂರು ಬಂದರೂ ತಕ್ಷಣ ಸ್ಪಂದಿಸುತ್ತಿದ್ದ ರವಿ, ತಮ್ಮ ಅತ್ಯುತ್ತಮ ಸೇವಾ ಮನೋಭಾವದಿಂದ ಸ್ಥಳೀಯರ ಪ್ರೀತಿಗೆ ಪಾತ್ರರಾಗಿದ್ದರು.

ಶನಿವಾರ ಕೆಲಸದ ವೇಳೆಯಲ್ಲೇ ಈ ದುರಂತ ಸಂಭವಿಸಿದ್ದು, ಸದಾ ಸಾರ್ವಜನಿಕರ ಸೇವೆಗೆ ಲಭ್ಯವಿರುತ್ತಿದ್ದ ದಕ್ಷ ಸಿಬ್ಬಂದಿಯ ಅಕಾಲಿಕ ಅಗಲಿಕೆ ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆಘಾತ ಹಾಗೂ ಕಂಬನಿ ತಂದಿದೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

​

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page