ದೇಶದಲ್ಲಿ ಲಾಕ್‌ಡೌನ್ ವದಂತಿ: ಕೇಂದ್ರ ಸರ್ಕಾರದಿಂದ ಮಹತ್ವದ ಸ್ಪಷ್ಟೀಕರಣ

ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ದೇಶಾದ್ಯಂತ ಮತ್ತೆ ಲಾಕ್‌ಡೌನ್ ಜಾರಿಯಾಗಲಿದೆ ಎಂಬ ವದಂತಿಗಳನ್ನು ಕೇಂದ್ರ ಸರ್ಕಾರ ಅಧಿಕೃತವಾಗಿ ತಳ್ಳಿಹಾಕಿದೆ. ಪ್ರಧಾನಿ ಮೋದಿ ಅವರು ಇತ್ತೀಚೆಗೆ ನೀಡಿದ್ದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದ್ದು, ಸದ್ಯಕ್ಕೆ ಅಂತಹ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟಪಡಿಸಿದ್ದಾರೆ.

ಜಾಗತಿಕ ಬಿಕ್ಕಟ್ಟಿನಿಂದ ಇಂಧನ ಮತ್ತು ಅಗತ್ಯ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಸರ್ಕಾರ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ ಎಂದು ಸಚಿವರು ತಿಳಿಸಿದ್ದಾರೆ. ಸಾರ್ವಜನಿಕರು ಇಂತಹ ಸುಳ್ಳು ಸುದ್ದಿಗಳನ್ನ ನಂಬಬಾರದು ಎಂದು ಮನವಿ ಮಾಡಲಾಗಿದ್ದು, ಪೂರೈಕೆ ಸರಪಳಿಯನ್ನು ಸುಗಮವಾಗಿಡಲು ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದ್ದಾರೆ.







Comments