;
top of page

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ 42 ರೂ. ಏರಿಕೆ: ಗ್ರಾಹಕರಿಗೆ ಬಿಗ್ ಶಾಕ್!

  • Jun 1
  • 1 min read

ಜಾಗತಿಕ ಇಂಧನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸಾರ್ವಜನಿಕರಿಗೆ ಬೆಲೆ ಏರಿಕೆಯ ಶಾಕ್ ನೀಡಿದೆ. 19 ಕೆಜಿ ತೂಕದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರದಲ್ಲಿ 42 ರೂ. ಹೆಚ್ಚಳ ಮಾಡಲಾಗಿದ್ದು, ಪರಿಷ್ಕೃತ ದರಗಳು ಇಂದಿನಿಂದಲೇ ಜಾರಿಗೆ ಬರಲಿವೆ. ಆದರೆ, ಗೃಹ ಬಳಕೆಯ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.

ಈ ಬೆಲೆ ಏರಿಕೆಯಿಂದಾಗಿ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 3,113.5 ರೂ. ತಲುಪಿದ್ದರೆ, ಬೆಂಗಳೂರಿನಲ್ಲಿ 46 ರೂ. ಹೆಚ್ಚಳದೊಂದಿಗೆ 3,198 ರೂ.ಗೆ ಏರಿಕೆಯಾಗಿದೆ. ಕೋಲ್ಕತ್ತಾದಲ್ಲಿ ಸಿಲಿಂಡರ್ ದರ 3,255.5 ರೂ. ತಲುಪಿದ್ದು, 5 ಕೆಜಿ ಸಣ್ಣ ಸಿಲಿಂಡರ್ ಬೆಲೆಯೂ 11 ರೂ. ಹೆಚ್ಚಾಗಿದೆ.

ವಾಣಿಜ್ಯ ಸಿಲಿಂಡರ್ ದರ ಏರಿಕೆಯು ಹೋಟೆಲ್, ರೆಸ್ಟೋರೆಂಟ್‌ಗಳು ಹಾಗೂ ಸಣ್ಣ ಉದ್ಯಮಗಳ ಮೇಲೆ ನೇರ ಪರಿಣಾಮ ಬೀರಲಿದ್ದು, ಆರ್ಥಿಕ ಹೊರೆಯನ್ನು ಹೆಚ್ಚಿಸಲಿದೆ. ಹೋಟೆಲ್ ತಿಂಡಿ-ತಿನಿಸುಗಳ ಬೆಲೆಗಳು ಕೂಡ ದುಬಾರಿಯಾಗುವ ಆತಂಕ ಎದುರಾಗಿದೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page