ಮನೆ ಮಾಲೀಕರಿಗೆ ಪೊಲೀಸರ ಖಡಕ್ ವಾರ್ನಿಂಗ್: ವಿದೇಶಿ ಪ್ರಜೆಗಳಿಗೆ ಬಾಡಿಗೆ ನೀಡುವ ಮುನ್ನ ಎಚ್ಚರ!
- sathyapathanewsplu
- 6 days ago
- 1 min read

ಹೆಚ್ಚುತ್ತಿರುವ ಡ್ರಗ್ಸ್ ದಂಧೆ ಹಾಗೂ ಅಕ್ರಮ ಚಟುವಟಿಕೆಗಳಲ್ಲಿ ವಿದೇಶಿ ಪ್ರಜೆಗಳ ಕೈವಾಡ ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ, ನಗರ ಪೊಲೀಸರು ಮನೆ ಮಾಲೀಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ವಿದೇಶಿ ಪ್ರಜೆಗಳಿಗೆ ಮನೆ ಬಾಡಿಗೆ ನೀಡುವ ಸಂದರ್ಭದಲ್ಲಿ 'ಫಾರ್ಮ್-16' (C-Form/Form-16) ಅನ್ನು ಸಂಬಂಧಪಟ್ಟ ಪೊಲೀಸ್ ಠಾಣೆಗೆ ಸಲ್ಲಿಸುವುದು ಇನ್ನು ಮುಂದೆ ಕಡ್ಡಾಯವಾಗಿದೆ. ಒಂದು ವೇಳೆ ಈ ನಿಯಮವನ್ನು ಉಲ್ಲಂಘಿಸಿ ಮಾಹಿತಿ ನೀಡದೆ ಬಾಡಿಗೆ ನೀಡಿದಲ್ಲಿ, ಅಂತಹ ಮನೆ ಮಾಲೀಕರ ವಿರುದ್ಧವೇ ನೇರವಾಗಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.
ಇತ್ತೀಚಿನ ದಿನಗಳಲ್ಲಿ ವೀಸಾ ಅವಧಿ ಮುಗಿದಿದ್ದರೂ ಅಕ್ರಮವಾಗಿ ನೆಲೆಸಿರುವ ವಿದೇಶಿಗರು ಡ್ರಗ್ಸ್ ಮಾರಾಟದಂತಹ ಜಾಲಗಳಲ್ಲಿ ತೊಡಗಿಸಿಕೊಳ್ಳುತ್ತಿರುವುದು ಪೊಲೀಸರ ಗಮನಕ್ಕೆ ಬಂದಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಪ್ರತಿಯೊಬ್ಬ ಮನೆ ಮಾಲೀಕರು ಬಾಡಿಗೆದಾರರ ಪಾಸ್‌ಪೋರ್ಟ್, ವೀಸಾ ಮತ್ತು ಇತರ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸಬೇಕು ಎಂದು ಸೂಚಿಸಲಾಗಿದೆ. ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಮತ್ತು ಸುರಕ್ಷಿತ ಬೆಂಗಳೂರನ್ನು ನಿರ್ಮಿಸಲು ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸಬೇಕೆಂದು ಪೊಲೀಸರು ಮನವಿ ಮಾಡಿದ್ದಾರೆ.






Comments