ಮಹಾರಾಷ್ಟ್ರದಲ್ಲಿ ಭೀಕರ ಹೆಲಿಕಾಪ್ಟರ್ ಅಪಘಾತ: ಡಿಸಿಎಂ ಅಜಿತ್ ಪವಾರ್ ಸೇರಿ ಆರು ಮಂದಿ ದುರ್ಮರಣ
- sathyapathanewsplu
- 1 day ago
- 1 min read

ಮಹಾರಾಷ್ಟ್ರ ರಾಜಕಾರಣದಲ್ಲಿ ಇಂದು ಕರಾಳ ದಿನ ಎದುರಾಗಿದೆ. ರಾಜ್ಯದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ಖಾಸಗಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಪವಾರ್ ಸೇರಿದಂತೆ ಒಟ್ಟು ಆರು ಮಂದಿ ಸಾವನ್ನಪ್ಪಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಮುಂಬೈನಿಂದ ಹೊರಟಿದ್ದ ವಿಮಾನವು ಬಾರಾಮತಿ ವಿಮಾನ ನಿಲ್ದಾಣದ ಬಳಿ ಲ್ಯಾಂಡಿಂಗ್ ಆಗುವ ಸಮಯದಲ್ಲಿ ತಾಂತ್ರಿಕ ದೋಷದಿಂದಾಗಿ ಈ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಚಾರಕ್ಕಾಗಿ ಅಜಿತ್ ಪವಾರ್ ಅವರು ಬಾರಾಮತಿಗೆ ತೆರಳುತ್ತಿದ್ದರು. ಮುಂಬೈನಿಂದ ಬೆಳಿಗ್ಗೆ 8 ಗಂಟೆಗೆ ಹೆಲಿಕಾಪ್ಟರ್ ಹಾರಾಟ ಆರಂಭಿಸಿತ್ತು, ಆದರೆ ಒಂದು ಗಂಟೆಯ ನಂತರ ಅಂದರೆ ಬೆಳಿಗ್ಗೆ 9 ಗಂಟೆಯ ಸುಮಾರಿಗೆ ಇಳಿಯುವ ಪ್ರಯತ್ನದಲ್ಲಿ ನೆಲಕ್ಕೆ ಅಪ್ಪಳಿಸಿದೆ. ಅಪಘಾತದ ತೀವ್ರತೆಗೆ ಸ್ಥಳದಲ್ಲಿ ಭಾರಿ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು, ದಟ್ಟವಾದ ಹೊಗೆ ಆವರಿಸಿಕೊಂಡಿತ್ತು ಎಂದು ಪ್ರತ್ಯಕ್ಷದರ್ಶಿಗಳು ಭಯಾನಕ ಘಟನೆಯನ್ನು ವಿವರಿಸಿದ್ದಾರೆ.
ಎನ್‌ಸಿಪಿ ಮುಖ್ಯಸ್ಥರಾಗಿದ್ದ ಅಜಿತ್ ಪವಾರ್ ಅವರು ಬಾರಾಮತಿ ಕ್ಷೇತ್ರದಲ್ಲಿ ನಾಲ್ಕು ಪ್ರಮುಖ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಬೇಕಿತ್ತು. ಈ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇತರರನ್ನು ಆಸ್ಪತ್ರೆಗೆ ಸಾಗಿಸಲಾಗಿದೆಯಾದರೂ, ಚಿಕಿತ್ಸೆ ಫಲಿಸದೆ ಸಾವಿನ ಸಂಖ್ಯೆ ಹೆಚ್ಚಾಗಿದೆ ಎಂದು ಸ್ಥಳೀಯ ಮೂಲಗಳು ವರದಿ ಮಾಡಿವೆ. ಈ ಘಟನೆಯು ಇಡೀ ದೇಶವನ್ನು ಬೆಚ್ಚಿಬೀಳಿಸಿದ್ದು, ರಾಜಕೀಯ ವಲಯದಲ್ಲಿ ತೀವ್ರ ಶೋಕ ವ್ಯಕ್ತವಾಗಿದೆ.






Comments