ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಅರ್ಜಿ ವಜಾ: ಸರ್ಕಾರಕ್ಕೆ ಮೇಲ್ಮನವಿ ಸಲ್ಲಿಸಲು ಹೈಕೋರ್ಟ್ ಸೂಚನೆ

ದಕ್ಷಿಣ ಕನ್ನಡದಿಂದ ರಾಯಚೂರು ಜಿಲ್ಲೆಯ ಮಾನ್ವಿಗೆ ಗಡೀಪಾರು ಮಾಡಿ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. 2026ರ ಮಾರ್ಚ್ 13ರಂದು ಪುತ್ತೂರು ವಿಭಾಗಾಧಿಕಾರಿ ಮೂರನೇ ಬಾರಿ ಹೊರಡಿಸಿದ್ದ ಈ ಆದೇಶವನ್ನು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಂ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ನಿಯಮದಂತೆ ಸರ್ಕಾರಕ್ಕೆ ಮೇಲ್ಮನವಿ ಸಲ್ಲಿಸಲು ಅವಕಾಶವಿರುವುದರಿಂದ ಅರ್ಜಿಯನ್ನು ಪುರಸ್ಕರಿಸಲಾಗದು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಮೇಲ್ಮನವಿ ಸಲ್ಲಿಕೆಗೆ ಅನುಕೂಲವಾಗುವಂತೆ ಮುಂದಿನ ಎರಡು ವಾರಗಳವರೆಗೆ ಯಾವುದೇ ಕಠಿಣ ಕ್ರಮ ಕೈಗೊಳ್ಳದಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.







Comments