;
top of page

ಮಲೆನಾಡು-ಕರಾವಳಿಯಲ್ಲಿ ಮುಂದುವರಿದ ವರುಣನ ಆರ್ಭಟ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!

Aug 3
1 min read

ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಭಾರೀ ಮಳೆ ಮುಂದುವರಿದಿದ್ದು, ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಹಲವು ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಕಾಫಿನಾಡಿನಲ್ಲಿ ನಿರಂತರ ಮಳೆಯಿಂದಾಗಿ ಕೊಪ್ಪ ಮತ್ತು ಶೃಂಗೇರಿ ತಾಲೂಕುಗಳ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಆದೇಶಿಸಿದ್ದಾರೆ. ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ತೀರದ ಜನರಿಗೆ ಎಚ್ಚರಿಕೆ ನೀಡಲಾಗಿದೆ.

ಮತ್ತೊಂದೆಡೆ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅವರು ಮಂಗಳೂರು, ಬಂಟ್ವಾಳ, ಉಳ್ಳಾಲ ಸೇರಿದಂತೆ ವಿವಿಧ ತಾಲೂಕುಗಳಲ್ಲಿ 10ನೇ ತರಗತಿಯವರೆಗೆ ಹಾಗೂ ಪುತ್ತೂರು, ಸುಳ್ಯ ಭಾಗಗಳಲ್ಲಿ ದ್ವಿತೀಯ ಪಿಯುಸಿ, ಐಟಿಐ, ಡಿಪ್ಲೊಮಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಸಾರ್ವಜನಿಕರು ಹಾಗೂ ಪ್ರವಾಸಿಗರು ಜಲಪಾತ ಮತ್ತು ನದಿ ಪಾತ್ರಗಳಿಗೆ ತೆರಳದಂತೆ ಜಿಲ್ಲಾಡಳಿತ ಸೂಚಿಸಿದೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page