ಮೋದಿ ವಿರುದ್ಧ 'ಭಯೋತ್ಪಾದಕ' ಪದ ಬಳಕೆ: ಮಲ್ಲಿಕಾರ್ಜುನ ಖರ್ಗೆಗೆ ಚುನಾವಣಾ ಆಯೋಗದಿಂದ ನೋಟಿಸ್
- Apr 23
- 1 min read

ಚೆನ್ನೈನಲ್ಲಿ ನಡೆದ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು "ಭಯೋತ್ಪಾದಕ" ಎಂದು ಕರೆದ ಆರೋಪದ ಮೇಲೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ. ಬಿಜೆಪಿ ನೀಡಿದ ದೂರಿನನ್ವಯ ಈ ಕ್ರಮ ಕೈಗೊಳ್ಳಲಾಗಿದ್ದು, ಮಾದರಿ ನೀತಿ ಸಂಹಿತೆ ಉಲ್ಲಂಘನೆಯ ಹಿನ್ನೆಲೆಯಲ್ಲಿ 24 ಗಂಟೆಗಳೊಳಗೆ ಸ್ಪಷ್ಟನೆ ನೀಡುವಂತೆ ಆಯೋಗ ಸೂಚಿಸಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಖರ್ಗೆ, ತಾವು ಆ ಶಬ್ದವನ್ನು ನೇರ ಅರ್ಥದಲ್ಲಿ ಬಳಸಿಲ್ಲವೆಂದು ಸಮರ್ಥಿಸಿಕೊಂಡಿದ್ದಾರೆ. ತನಿಖಾ ಸಂಸ್ಥೆಗಳ ಮೂಲಕ ವಿರೋಧ ಪಕ್ಷಗಳನ್ನು ಬೆದರಿಸುತ್ತಿರುವ ಕ್ರಮವನ್ನು ಟೀಕಿಸಲು ಈ ಪದ ಬಳಸಿದ್ದಾಗಿ ಅವರು ತಿಳಿಸಿದ್ದಾರೆ. ಈ ಹಿಂದೆ ಕೂಡ ಮೋದಿ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಖರ್ಗೆ ಅವರಿಗೆ ಆಯೋಗದಿಂದ ನೋಟಿಸ್ ನೀಡಲಾಗಿತ್ತು.







Comments