ಮಂಗಳೂರು ಜೈಲಿನಲ್ಲಿ ಭಾಸ್ಕರ ಶೆಟ್ಟಿ ಕೊಲೆ ಆರೋಪಿಗಳ ಮೇಲೆ ಹಲ್ಲೆ ಪ್ರಕರಣ : 14 ಮಂದಿ ದೋಷಿಗಳು

ಮಂಗಳೂರು: ಉಡುಪಿಯ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳಾದ ನವನೀತ್ ಶೆಟ್ಟಿ ಹಾಗೂ ಜ್ಯೋತಿಷಿ ನಿರಂಜನ್ ಭಟ್ ಮೇಲೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲೇ ದಾಳಿ ನಡೆಸಿದ ಪ್ರಕರಣದಲ್ಲಿ 14 ಮಂದಿ ಆರೋಪಿಗಳು ದೋಷಿಗಳೆಂದು ನ್ಯಾಯಾಲಯ ತೀರ್ಪು ನೀಡಿದೆ. ದೋಷಿಗಳ ಶಿಕ್ಷೆಯ ಪ್ರಮಾಣವನ್ನು ಸೆಪ್ಟೆಂಬರ್ 16ರಂದು ಪ್ರಕಟಿಸಲಾಗುವುದು.
2017ರ ಸೆಪ್ಟೆಂಬರ್ 11ರಂದು ಮಧ್ಯಾಹ್ನ ಸುಮಾರು 12.30ರ ವೇಳೆಗೆ ಮಂಗಳೂರು ಜಿಲ್ಲಾ ಕಾರಾಗೃಹದ ಹೊಸ ಕಟ್ಟಡದ ‘ಬಿ’ ಬ್ಲಾಕ್‌ನ ವರಾಂಡದಲ್ಲಿ ಈ ದಾಳಿ ನಡೆದಿತ್ತು. ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ನವನೀತ್ ಶೆಟ್ಟಿ ಮತ್ತು ನಿರಂಜನ್ ಭಟ್ ಅವರ ಮೇಲೆ ಕಾರಾಗೃಹದಲ್ಲಿದ್ದ ಕೆಲ ಕೈದಿಗಳು ಕ್ಯಾರಂ ಬೋರ್ಡ್, ಸ್ಟೀಲ್ ಡ್ರಮ್ ಸೇರಿದಂತೆ ವಿವಿಧ ವಸ್ತುಗಳಿಂದ ಹಲ್ಲೆ ನಡೆಸಿದ್ದರು ಎನ್ನಲಾಗಿತ್ತು.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿತ್ತು. ಇದೀಗ ಪ್ರಕರಣದ ವಿಚಾರಣೆ ಪೂರ್ಣಗೊಂಡಿದ್ದು, ನ್ಯಾಯಾಲಯವು 14 ಮಂದಿಯನ್ನು ದೋಷಿಗಳೆಂದು ಘೋಷಿಸಿದೆ. ಸೆ.16ರಂದು ನ್ಯಾಯಾಲಯ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಿದೆ.







Comments