;
top of page

ಮಂಗಳೂರು ವಿವಿಯಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

Aug 1
1 min read

ಮಂಗಳೂರು, ಆ. 1: ಮಂಗಳೂರು ವಿಶ್ವವಿದ್ಯಾನಿಲಯವು 2026–27ನೇ ಶೈಕ್ಷಣಿಕ ಸಾಲಿಗೆ ವಿವಿಧ ಸ್ನಾತಕೋತ್ತರ ಅಧ್ಯಯನ ವಿಭಾಗಗಳಲ್ಲಿ ಅತಿಥಿ ಉಪನ್ಯಾಸಕರ (Guest Faculty) ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಆಗಸ್ಟ್ 1, 2026ರೊಳಗೆ ನಿಗದಿತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.

ವಿಶ್ವವಿದ್ಯಾನಿಲಯದ ಕನ್ನಡ, ಇಂಗ್ಲಿಷ್, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಸೋಷಿಯಲ್ ವರ್ಕ್, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ಜಿಯೋಗ್ರಫಿ, ಲೈಬ್ರರಿ ಮತ್ತು ಇನ್‌ಫಾರ್ಮೇಷನ್ ಸೈನ್ಸ್, ಬಯೋಕೆಮಿಸ್ಟ್ರಿ, ಮೆಡಿಕಲ್ ಫಿಸಿಕ್ಸ್, ಫಿಸಿಕ್ಸ್, ಕೆಮಿಸ್ಟ್ರಿ, ಎನ್ವಿರಾನ್‌ಮೆಂಟ್ ಸೈನ್ಸ್, ಇಲೆಕ್ಟ್ರಾನಿಕ್ಸ್, ಮೆಟೀರಿಯಲ್ ಸೈನ್ಸ್, ಬಾಟನಿ, ಪ್ರಾಣಿಶಾಸ್ತ್ರ, ಸೈಬರ್ ಸೆಕ್ಯೂರಿಟಿ, ಫುಡ್ ಸೈನ್ಸ್ ಮತ್ತು ನ್ಯೂಟ್ರಿಷನ್, ಬಯೋಟೆಕ್ನಾಲಜಿ, ಹ್ಯೂಮನ್ ಕಾನ್ಷಿಯಸ್‌ನೆಸ್ ಮತ್ತು ಯೋಗಿಕ್ ಸೈನ್ಸ್, ಇಂಡಸ್ಟ್ರಿಯಲ್ ಕೆಮಿಸ್ಟ್ರಿ, ಗಣಿತ, ಮೈಕ್ರೋಬಯಾಲಜಿ, ಕಂಪ್ಯೂಟರ್ ಸೈನ್ಸ್/ಎಂಸಿಎ, ಎಂ.ಪಿಇಡ್., ಬಿ.ಪಿಇಡ್., ಎಂಬಿಎ (ಟೂರಿಸಂ), ಎಂಬಿಎ, ಸ್ಟಾಟಿಸ್ಟಿಕ್ಸ್, ಎಂಬಿಎ (ಐಬಿ), ಎಂ.ಎಡ್. ಹಾಗೂ ಕಾಮರ್ಸ್ ಸೇರಿದಂತೆ ಹಲವು ವಿಭಾಗಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಲಾಗುತ್ತಿದೆ.

ಅರ್ಜಿ ಸಲ್ಲಿಸಲು ಸಂಬಂಧಿತ ವಿಷಯದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಕನಿಷ್ಠ ಶೇ.55 ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ ಹೊಂದಿರಬೇಕು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕನಿಷ್ಠ ಶೇ.50 ಅಂಕಗಳಿದ್ದರೆ ಸಾಕಾಗುತ್ತದೆ.

ಸಾಮಾನ್ಯ ಮತ್ತು ಇತರ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ₹250 ಹಾಗೂ ಎಸ್‌ಸಿ/ಎಸ್‌ಟಿ/ವರ್ಗ-1 ಅಭ್ಯರ್ಥಿಗಳಿಗೆ ₹125 ನಿಗದಿಪಡಿಸಲಾಗಿದೆ. ಒಂದಕ್ಕಿಂತ ಹೆಚ್ಚು ವಿಷಯಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರತಿ ಹೆಚ್ಚುವರಿ ಅರ್ಜಿಗೆ ₹100 ಪ್ರತ್ಯೇಕವಾಗಿ ಪಾವತಿಸಬೇಕು. ಶುಲ್ಕವನ್ನು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‌ಸೈಟ್‌ನ ‘Online Fees Collection’ ವಿಭಾಗದ ‘005/60 – Guest Faculty Application Fee’ ಮೂಲಕ ಪಾವತಿಸಿ, ಇ-ರಶೀದಿಯನ್ನು ಅರ್ಜಿಯೊಂದಿಗೆ ಅಪ್‌ಲೋಡ್ ಮಾಡಬೇಕು.

ಅಭ್ಯರ್ಥಿಗಳ ಆಯ್ಕೆ ಯುಜಿಸಿ ಮಾರ್ಗಸೂಚಿಗಳು ಹಾಗೂ ಕರ್ನಾಟಕ ಸರ್ಕಾರದ ಮೀಸಲಾತಿ ನಿಯಮಗಳ ಅನ್ವಯ ನಡೆಯಲಿದೆ. ಸಂದರ್ಶನಕ್ಕೆ ಹಾಜರಾಗುವ ವೇಳೆ ಎಸ್‌ಎಸ್‌ಎಲ್‌ಸಿ, ಪದವಿ ಮತ್ತು ಸ್ನಾತಕೋತ್ತರ ಅಂಕಪಟ್ಟಿಗಳು, ಪದವಿ ಪ್ರಮಾಣಪತ್ರಗಳು, ಸಂಶೋಧನಾ ಪ್ರಕಟಣೆಗಳಿಗೆ ಸಂಬಂಧಿಸಿದ ದಾಖಲೆಗಳು (SCOPUS/WOS/UGC-CARE ಪಟ್ಟಿಯಲ್ಲಿ ಪ್ರಕಟಿತವಾಗಿದ್ದರೆ) ಹಾಗೂ ಅವುಗಳ ಸ್ವಯಂ ದೃಢೀಕರಿಸಿದ ಪ್ರತಿಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ.

ಸಂದರ್ಶನದ ದಿನಾಂಕವನ್ನು ವಿಶ್ವವಿದ್ಯಾನಿಲಯವು ಶೀಘ್ರದಲ್ಲೇ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ಮಾನ್ಯ ಇ-ಮೇಲ್ ವಿಳಾಸ ಮತ್ತು ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸುವಂತೆ ವಿಶ್ವವಿದ್ಯಾನಿಲಯ ತಿಳಿಸಿದೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page