;
top of page

ಮಂಗಳೂರು: 11 ಮಂದಿ ಬಾಂಗ್ಲಾ ವಲಸಿಗರ ಬಂಧನ; ತೀವ್ರಗೊಂಡ ಪೊಲೀಸ್ ಕಾರ್ಯಾಚರಣೆ

  • 2 days ago
  • 1 min read

ಕಡಲ ನಗರಿ ಮಂಗಳೂರಿನಲ್ಲಿ ಅಕ್ರಮ ವಲಸಿಗರ ವಿರುದ್ಧ ಪೊಲೀಸರ ತೀವ್ರ ಕಾರ್ಯಾಚರಣೆ ಮುಂದುವರಿದಿದೆ. ಇತ್ತೀಚೆಗೆ ಉರ್ವಾ ಸಮೀಪದ ಕಟ್ಟಡ ನಿರ್ಮಾಣ ಪ್ರದೇಶವೊಂದರ ಮೇಲೆ ದಾಳಿ ನಡೆಸಿರುವ ಪೊಲೀಸರು, ನಾಲ್ವರು ಅಪ್ರಾಪ್ತರು ಸೇರಿದಂತೆ 11 ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ವಶಕ್ಕೆ ಪಡೆದಿದ್ದಾರೆ.

ಸುರತ್ಕಲ್ ದಾಳಿಯ ಬೆನ್ನಲ್ಲೇ ಈ ಕಾರ್ಯಾಚರಣೆ ನಡೆದಿದ್ದು, ಕಮಿಷನರೇಟ್ ವ್ಯಾಪ್ತಿಯಲ್ಲಿ ಬಂಧಿತರ ಒಟ್ಟು ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಇವರೆಲ್ಲರೂ ಪಶ್ಚಿಮ ಬಂಗಾಳದ ನಕಲಿ ವಿಳಾಸ ಬಳಸಿ ನಗರದಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಇವರಿಂದ ಪ್ರಮುಖ ಬಾಂಗ್ಲಾ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಅಕ್ರಮ ವಲಸೆ ಜಾಲಕ್ಕೆ ಸಂಬಂಧಿಸಿ ಪಶ್ಚಿಮ ಬಂಗಾಳದ ಏಜೆಂಟ್ ವಿರುದ್ಧ ಉರ್ವಾ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬಂಧಿತರ ವಿರುದ್ಧ ಕಾನೂನು ಕ್ರಮಕ್ಕಾಗಿ ಬೆಂಗಳೂರಿನ ಎಫ್‌ಆರ್‌ಆರ್‌ಒಗೆ ವರದಿ ಸಲ್ಲಿಕೆಯಾಗಿದ್ದು, ಉಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page