ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ – ಚರ್ಚ್ ಫಾದರ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

ಮಂಗಳೂರು ನಗರದ ಚರ್ಚ್ ಒಂದರ ಧರ್ಮಗುರು ಫಾದರ್ ಸಿಪ್ರಿಯನ್ ಪಿಂಟೋ ವಿರುದ್ಧ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಕೇಳಿಬಂದಿದೆ. ಆಗಸ್ಟ್ 14ರಂದು ಸಂಜೆ ಪ್ರಾರ್ಥನೆಗೆ ಬಂದಿದ್ದ ಬಾಲಕನಿಗೆ ಚಾಕಲೇಟ್ ನೀಡಿ ಪುಸಲಾಯಿಸಿ, ಚರ್ಚ್‌ನ ಕೊಠಡಿಯಲ್ಲಿ ಅಸಭ್ಯ ವರ್ತನೆ ನಡೆಸಿ ನಿರಂತರ ಕಿರುಕುಳ ನೀಡುತ್ತಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಭಯಗೊಂಡ ಬಾಲಕ ಈ ಕುರಿತು ಪೋಷಕರಿಗೆ ತಿಳಿಸಿದ್ದು, ಪೋಷಕರು ಬಿಷಪ್ ಅವರನ್ನು ಭೇಟಿಯಾದಾಗ ಪೊಲೀಸ್ ದೂರು ದಾಖಲಿಸಲು ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.







Comments